ಬ್ರೇಕಿಂಗ್ ನ್ಯೂಸ್
05-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.5 : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಪಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ನನ್ನೂ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿರುವ ಅಧಿಕಾರಿಗಳು ಇದೀಗ ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ 7 ಮಂದಿ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದ ಎರಡು ತಿಂಗಳ ಮೊದಲೇ ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಪ್ರಕರಣದಲ್ಲಿ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಾಝ್ ಮುನೀರ್ ಮತ್ತು ಯಾಸಿನ್ ಎಂಬುವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಮೊಹಮ್ಮದ್ ಶಾರೀಕ್ ತಲೆಮರೆಸಿಕೊಂಡು ಬಳಿಕ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದ.
ಎನ್ಐಎ ಅಧಿಕಾರಿಗಳು ಈಗ ಶಿವಮೊಗ್ಗ ಮತ್ತು ಮಂಗಳೂರು ಬ್ಲಾಸ್ಟ್ ಪ್ರಕರಣದ ಬಗ್ಗೆ ಏಕಕಾಲದಲ್ಲಿ ತನಿಖೆ ನಡೆಸುತ್ತಿದ್ದಾರೆ.
Trail blast in Shivamogga, NIA raids P A College of Engineering in Mangalore for details as accused Maz Muneer Ahmed studied at the same college. The NIA has raided the college to collect details of the same.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm