ಬ್ರೇಕಿಂಗ್ ನ್ಯೂಸ್
12-01-23 10:08 pm Mangalore Correspondent ಕರಾವಳಿ
ಉಳ್ಳಾಲ, ಜ.12 : ಕೊರಗಜ್ಜನ ಕುರಿತಾದ ಬಹುಭಾಷಾ ಚಿತ್ರ "ಕರಿ ಹೈದ ಕರಿಯಜ್ಜ" ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ, ಶೃತಿ ಮತ್ತು ಚಿತ್ರತಂಡವು ಗುಳಿಗನಿಗೆ ಹರಕೆಯ ಹುಂಜವನ್ನ ಸಮರ್ಪಿದ್ದಾರೆ.
ತ್ರಿವಿಕ್ರಮ ಸಫಲ್ಯ ಅವರು 5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ "ಕರಿ ಹೈದ ಕರಿಯಜ್ಜ" ಚಿತ್ರದ ಚಿತ್ರೀಕರಣದ ಆರಂಭದಲ್ಲೇ ನಿರ್ದೇಶಕರಾದ ಸುಧೀರ್ ರಾಜ್ ಉರ್ವ ಅವರ ಸಲಹೆಯಂತೆ ಬುರ್ದುಗೋಳಿ ಕ್ಷೇತ್ರದ ಗುಳಿಗಜ್ಜನಿಗೆ ಹುಂಜ ಮತ್ತು ಮಂಗಳೂರಿನ ನಂದಿಗುಡ್ಡೆಯ ಕೊರಗಜ್ಜನ ಕ್ಷೇತ್ರದಲ್ಲಿ ಕೋಲ ಸೇವೆ ನೀಡುತ್ತೇನೆಂದು ಹರಕೆ ಹೊತ್ತಿದ್ದರಂತೆ. ಅದರಂತೆ ಬುರ್ದುಗೋಳಿ ಕ್ಷೇತ್ರಕ್ಕೆ ಹುಂಜವನ್ನ ಹರಕೆ ನೀಡಿದ್ದು ಗುಳಿಗ-ಕೊರಗಜ್ಜನ ಉದ್ಭವ ಶಿಲೆ ಸಮ್ಮುಖದಲ್ಲಿ ಚಿತ್ರತಂಡದವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ತೊಂಭತ್ತರ ದಶಕದ ಜನಪ್ರಿಯ ನಾಯಕಿ ನಟಿಯರಾದ ಭವ್ಯ ಮತ್ತು ಶೃತಿ ಅವರು ಕೊರಗಜ್ಜ-ಗುಳಿಗಜ್ಜನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇಂದು ನಟಿ ಭವ್ಯ ಅವರ ಜನುಮ ದಿನವಾಗಿದ್ದು ಈ ಸಂದರ್ಭದಲ್ಲೇ ಕೊರಗಜ್ಜನ ಕ್ಚೇತ್ರಕ್ಕೆ ಭೇಟಿ ನೀಡಿದ್ದು ನಿಜಕ್ಕೂ ನನಗೆ ಸಿಕ್ಕಿದ ಭಾಗ್ಯ ಎಂದವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಕರಿ ಹೈದ ಕರಿಯಜ್ಜ ಚಿತ್ರದ 99 ಶೇಕಡಾ ಚಿತ್ರೀಕರಣ ಸಂಪೂರ್ಣಗೊಂಡಿದ್ದು ಎಪ್ರಿಲ್, ಮೇ ತಿಂಗಳಲ್ಲಿ ಬಿಡುಗಡೆಗೊಳಿಸಲಾಗುವುದು. ತುಳು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಚಿತ್ರ ಮೂಡಿ ಬರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಗಾಡಿ, ಮಡಂತ್ಯಾರ್, ಸೋಮೇಶ್ವರ, ಉಳ್ಳಾಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು ಕೊರಗಜ್ಜನ 800 ವರ್ಷಗಳ ಐತಿಹ್ಯದ ಕಥೆಯನ್ನೇ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ನಿರ್ಮಾಪಕರಾದ ತ್ರಿವಿಕ್ರಮ ಸಫಲ್ಯ ಹೇಳಿದ್ದಾರೆ.
ನಟಿ ಶೃತಿ ಅವರ ಸುಪುತ್ರಿ ಗೌರಿ ಚಿತ್ರ ತಂಡದ ಜತೆಯಲ್ಲಿದ್ದರು. ಬಳಿಕ ಚಿತ್ರತಂಡವು ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರಕ್ಕೆ ಹರಕೆಯ ಕೋಲ ನೀಡಲು ತೆರಳಿತು. ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಕಲ್ಲಾಪು, ಭಂಡಾರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಪ್ರಮುಖರಾದ ಪ್ರಶಾಂತ್ ಗಟ್ಟಿ ಕಾಯಂಗಳ, ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್.ಕುಂಪಲ ಮೊದಲಾದವರು ಉಪಸ್ಥಿತರಿದ್ದರು.
Actresses Bhavya, Shruthi and the team have dedicated a sacrificial to Guliga, who visited the adisthalam of Koragajja-Guligajja Udbhava Shila in Kallapu Burdugoli for the success of the multilingual film "Kari Haida Kariyajja".At the beginning of the shoot of 'Kari Haida Kariyajja', which is being produced by Trivikrama Safalya at a cost of Rs 5 crore, on the advice of director Sudhir Raj Urva, he had vowed to serve guligajja in Burdugoli constituency and kola seva at Koragajjana kshetra in Nandigudda in Mangaluru.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm