ಬ್ರೇಕಿಂಗ್ ನ್ಯೂಸ್
13-01-23 12:14 pm Mangalore Correspondent ಕರಾವಳಿ
ಪುತ್ತೂರು, ಜ.13 : ಇಲ್ಲಿನ ಹೊಟೇಲ್ ಒಂದರಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಚಿಕನ್ ಫ್ರೈನಲ್ಲಿ ಹುಳವಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಪುತ್ತೂರು ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಹೊಟೇಲನ್ನು ಮುಚ್ಚಿಸಿದ ಘಟನೆ ನಡೆದಿದೆ.
ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಬಳಿಯ ಮಾಂಸಹಾರಿ ಹೊಟೇಲಿನಲ್ಲಿ ನೀಡಿದ್ದ ಚಿಕನ್ ಫ್ರೈಯಲ್ಲಿ ಹುಳ ಕಾಣಿಸಿಕೊಂಡಿತ್ತೆನ್ನಲಾಗಿದೆ. ಇದನ್ನು ಆ ವ್ಯಕ್ತಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದೆ.
ಪುತ್ತೂರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳು ಗುರುವಾರ ರಾತ್ರಿ ಡಿಢೀರ್ ದಾಳಿ ನಡೆಸಿ ಆಹಾರ ಖಾದ್ಯಗಳನ್ನು ತಪಾಸಣೆ ನಡೆಸಿದರು. ಕೆಲವೊಂದು ಖಾದ್ಯಗಳ ಸ್ಯಾಂಪಲ್ ಗಳನ್ನು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲು ಸಂಗ್ರಹಿಸಲಾಯಿತು. ಹೋಟೇಲ್ ಉದ್ಯಮಕ್ಕೆ ಸಂಬಂಧಿಸಿ ಪಂಚಾಯತ್ ಪರವಾನಿಗೆ, ಆಹಾರ ವಿಭಾಗದ ಪರವಾನಿಗೆ, ಆರೋಗ್ಯ ಇಲಾಖೆಯ ಪರವಾನಿಗೆಯನ್ನು ಹೊಂದದೇ ಇರುವುದು ಕಂಡುಬಂದಾಗ ತಹಶೀಲ್ದಾರ್ ಹೊಟೇಲನ್ನು ಮುಚ್ಚಿಸಲು ನಿರ್ದೇಶನ ನೀಡಿದರು. ಅದರಂತೆ ಅಧಿಕಾರಿಗಳು ಗುರುವಾರ ರಾತ್ರಿಯೇ ಹೊಟೇಲನ್ನು ಬಂದ್ ಮಾಡಿಸಿದ್ದಾರೆ.
ಇತ್ತೀಚೆಗೆ ಕಾಸರಗೋಡಿನಲ್ಲಿ 19 ವರ್ಷದ ಯುವತಿ ಚಿಕನ್ ಬಿರಿಯಾನಿ ತಿಂದು ಸಾವುಗೀಡಾದ ಘಟನೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
Worms found in fried chicken, an illegal restaurant seized by officals in Puttur.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm