ಬ್ರೇಕಿಂಗ್ ನ್ಯೂಸ್
20-01-23 01:45 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ಎನ್ಐಎ ಹತ್ತು ಲಕ್ಷ ಬಹುಮಾನ ಘೋಷಣೆ ಮಾಡಿದೆ.
ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮೊಹಮ್ಮದ್ ಷರೀಫ್(53) ಮತ್ತು ಮಿತ್ತೂರು ಕಮ್ಯುನಿಟಿ ಸೆಂಟರಿನ ಮಸೂದ್ ಕೆ.ಎ. ಅಗ್ನಾಡಿ (40) ಪತ್ತೆಗೆ ತಲಾ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರಿಬ್ಬರು ಕೂಡ ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕರಾಗಿದ್ದರು. ವಿಟ್ಲ ಬಳಿಯ ಮಿತ್ತೂರಿನ ಕಮ್ಯುನಿಟಿ ಸೆಂಟರಿಗೆ ಪಿಎಫ್ಐ ನಿಷೇಧ ಸಂದರ್ಭದಲ್ಲಿ ದಾಳಿ ನಡೆದಿತ್ತು. ಪಿಎಫ್ಐ ಕಾರ್ಯಕರ್ತರ ಸಭೆ, ತರಬೇತಿ ಕಮ್ಯುನಿಟಿ ಸೆಂಟರಿನಲ್ಲಿ ನಡೀತಿತ್ತು ಎನ್ನುವುದು ತನಿಖೆಯಲ್ಲಿ ಕಂಡುಬಂದಿದ್ದರಿಂದ ಆ ಸೆಂಟರನ್ನು ಜಿಲ್ಲಾಡಳಿತ ಸೀಲ್ ಮಾಡಿತ್ತು.

ಆ ಕಮ್ಯುನಿಟಿ ಸೆಂಟರನ್ನು ಮಸೂದ್ ಅಗ್ನಾಡಿ ನಡೆಸುತ್ತಿದ್ದ ಎನ್ನುವ ವಿಚಾರವೂ ಅಂದು ಹರಿದಾಡಿತ್ತು. ಆನಂತರ, ಮಸೂದ್ ಪೊಲೀಸರ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ. ಎನ್ಐಎ ಅಧಿಕಾರಿಗಳು ಇದೀಗ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿಯೂ ಮಸೂದ್ ಪಾತ್ರ ಕಂಡುಕೊಂಡಿದ್ದು ಆತನ ಪತ್ತೆಗಾಗಿ ಈಗ ಐದು ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.

ಇವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್ಐಎ ಕಚೇರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ನಾಲ್ವರು ಆರೋಪಿಗಳ ಪತ್ತೆಗಾಗಿ ಎನ್ಐಎ 14 ಲಕ್ಷ ಬಹುಮಾನ ಘೋಷಿಸಿತ್ತು. ಆರೋಪಿಗಳು ತಲೆಮರೆಸಿಕೊಂಡಿದ್ದು ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.
The National Investigation Agency (NIA) has announced a cash prize of Rs 5 lac for helping the agency find the whereabouts of two more accused in the murder case of BJP Yuva Morcha leader Praveen Nettaru. Mohammed Sharif and Masood have been identified as accused in the murder case.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm