ಬ್ರೇಕಿಂಗ್ ನ್ಯೂಸ್
23-01-23 08:50 pm Mangalore Correspondent ಕರಾವಳಿ
ಮಂಗಳೂರು, ಜ.23 : ಕಂಬಳ ಕ್ಷೇತ್ರದ ಉದಯೋನ್ಮುಖ ಓಟಗಾರ ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಈ ಬಾರಿಯೂ ಮಂಗಳೂರು ಕಂಬಳದಲ್ಲಿ ಪದಕ ಬಾಚಿದ್ದಾರೆ. ಮಂಗಳೂರು ಕಂಬಳದಲ್ಲಿ ಸತತ ಆರನೇ ಬಾರಿಯೂ ಫೈನಲ್ ಪ್ರವೇಶ ಮಾಡಿ ಪದಕ ಗೆದ್ದಿರುವುದು ನಿಶಾಂತ್ ಶೆಟ್ಟಿ ಸಾಧನೆ.
ಈ ಬಾರಿ ನಿಶಾಂತ್ ಶೆಟ್ಟಿ ಅವರು ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ ಅವರ ಕೋಣಗಳನ್ನು ಓಡಿಸಿ ಹಗ್ಗದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬೃಜೇಶ್ ಚೌಟ ಸಾರಥ್ಯದಲ್ಲಿ ನಡೆಯುತ್ತಿರುವ ಮಂಗಳೂರಿನ ರಾಮ –ಲಕ್ಷ್ಮಣ ಕಂಬಳ ಕೂಟದಲ್ಲಿ, ಸತತ ಆರು ವರ್ಷವೂ ನಿಶಾಂತ್ ಶೆಟ್ಟಿ ಪದಕ ಗೆದ್ದಿದ್ದಾರೆ. ಆರು ವರ್ಷದಲ್ಲಿ ನಿಶಾಂತ್ ಮೂರು ಪ್ರಥಮ, ಮೂರು ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ.
ಈ ಬಾರಿಯ ಕಂಬಳ ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 29 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 78 ಜೊತೆ ಕೋಣಗಳು ಭಾಗವಹಿಸಿದ್ದವು.
ಈ ಬಾರಿಯ ಮಂಗಳೂರು ಕಂಬಳ ಫಲಿತಾಂಶ
ಕನೆಹಲಗೆ ( ನೀರು ನೋಡಿ ಬಹುಮಾನ) ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಅವರ ಕೋಣ, (ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ), ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವರ ಕೋಣ, (ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ)
ಅಡ್ಡ ಹಲಗೆ ; ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ” (ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ) ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಎ” (ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ)
ಹಗ್ಗ ಹಿರಿಯ; ಪ್ರಥಮ - ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “ಬಿ”(ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ) ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ (ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ)
ಹಗ್ಗ ಕಿರಿಯ: ಪ್ರಥಮ- ಬೇಳಿಂಜೆ ವಿಪಿನ್ ರೈ “ಎ” (ಓಡಿಸಿದವರು: ಭಟ್ಕಳ ಶಂಕರ್) ದ್ವಿತೀಯ: ಮೂಡಬಿದ್ರೆ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್ (ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ)
ನೇಗಿಲು ಹಿರಿಯ : ಪ್ರಥಮ - ಗುರುಪುರ ಕಾರಮೊಗರು ಗುತ್ತು ಯಶ್ ಜಗದೀಶ್ ಆಳ್ವ “ಬಿ” (ಓಡಿಸಿದವರು: ನಕ್ರೆ ಪವನ್ ಮಡಿವಾಳ್) ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಎ” (ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ)
ನೇಗಿಲು ಕಿರಿಯ ; ಪ್ರಥಮ- ಭಟ್ಕಳ ಎಚ್.ಎನ್. ನಿವಾಸ ಪಿನ್ನುಪಾಲ್ (ಓಡಿಸಿದವರು: ಭಟ್ಕಳ ಶಂಕರ್) ದ್ವಿತೀಯ: ಕಟೀಲ್ ಕೊಡೆತ್ತೂರು ಕಿನ್ನೆಚ್ಚಿಲ್ ಲತಾ ಪ್ರಸಾದ್ ಶೆಟ್ಟಿ (ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ)
Sixth edition Kambala in Mangalore, Jogibettu Nishanth shetty winner for the sixt cconsequntive time. The sixth annual day and night Mangaluru Kambala’ was held at Goldfinch City Grounds, Bangra Kuluru, in the city on January 22.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm