ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ; ಬೆಳ್ತಂಗಡಿಯ ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ಜಾರಿ 

25-01-23 03:25 pm       Mangalore Correspondent   ಕರಾವಳಿ

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಆರೋಪಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. 

ಮಂಗಳೂರು, ಜ.25 : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಆರೋಪಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. 

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ನಿವಾಸಿ ಬಾಬು(48) ಶಿಕ್ಷೆಗೊಳಗಾದ ವ್ಯಕ್ತಿ. ಕಳೆದ 2021ರ ಡಿಸೆಂಬರ್ ತಿಂಗಳಿ‌ನಿಂದ ಫೆಬ್ರವರಿ 26ರ ವರೆಗಿನ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಹಲವಾರು ಬಾರಿ ಅತ್ಯಾಚಾರ ನಡೆಸಿದ್ದಾಗಿ ಬೆಳ್ತಂಗಡಿ ಠಾಣೆಯಲ್ಲಿ ಮಾರ್ಚ್ 3ರಂದು ದೂರು ದಾಖಲಾಗಿತ್ತು. ತನಿಖೆ ನಡೆಸಿದ ಬೆಳ್ತಂಗಡಿ ಎಸ್ಐ ನಂದಕುಮಾರ್ ಮತ್ತು ವೃತ್ತ ನಿರೀಕ್ಷಕ ಶಿವಕುಮಾರ್, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. 

ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ ವಿಶೇಷ) ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣಸ್ವಾಮಿ ವಾದಿಸಿದ್ದರು.

The additional and sessions court here sentenced Bobby, to 20 years imprisonment, for repeatedly raping a minor girl. The accused sentenced to jail is Bobby (48), a resident of Beltangady. He also fined Rs 50,000. Justice Radhakrishna convicted Bobby of repeatedly raping a minor girl between 8 pm on December 19, 2021 and 8.30 pm on February 26, 2022 in Beltangady. Failure to pay the fine will attract another six months imprisonment. The victim had lodged a police complaint at Beltangady police station on March 3, 2022. The station sub inspector Nandakumar had registered a case under POCSO Act.