ಅನುಮತಿ ಪಡೆದೇ ಗಣಿಗಾರಿಕೆ ನಡೆಸುತ್ತಿದ್ದೇನೆ, ಅಕ್ರಮದ ಬಗ್ಗೆ ತನಿಖೆ ನಡೆಸಿ ; ರಾಜೇಶ್ ನಾಯ್ಕ್

19-10-20 04:35 pm       Mangalore Correspondent   ಕರಾವಳಿ

ನನಗೆ ಮುಡಿಪುನಲ್ಲಿ ಯಾರೂ ಸಂಬಂಧಿಕರು ಇಲ್ಲ. ನಾನು ಗಣಿ ಇಲಾಖೆಯಿಂದ ಅನುಮತಿ ಪಡೆದೇ ಕೆಂಪು ಕಲ್ಲಿನ ಕ್ವಾರಿ ನಡೆಸುತ್ತಿದ್ದೇನೆ. ಕಳೆದ ಆರು ತಿಂಗಳಲ್ಲಿ ಲಾಕ್ಡೌನ್ ಕಾರಣ ಗಣಿಗಾರಿಕೆ ಸ್ಥಗಿತವಾಗಿದೆ ಎಂದು ರಾಜೇಶ್ ನಾಯ್ಕ್ ಹೇಳಿದ್ದಾರೆ. 

ಮಂಗಳೂರು, ಅಕ್ಟೋಬರ್ 19: ಮುಡಿಪು ಅಕ್ರಮ ಗಣಿಗಾರಿಕೆ ಕುರಿತ ಮಾಜಿ ಸಚಿವ ರಮಾನಾಥ ರೈ ಆರೋಪದ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಮುಡಿಪುನಲ್ಲಿ ಯಾರೂ ಸಂಬಂಧಿಕರು ಇಲ್ಲ. ನಾನು ಗಣಿ ಇಲಾಖೆಯಿಂದ ಅನುಮತಿ ಪಡೆದೇ ಕೆಂಪು ಕಲ್ಲಿನ ಕ್ವಾರಿ ನಡೆಸುತ್ತಿದ್ದೇನೆ. ಕಳೆದ ಆರು ತಿಂಗಳಲ್ಲಿ ಲಾಕ್ಡೌನ್ ಕಾರಣ ಗಣಿಗಾರಿಕೆ ಸ್ಥಗಿತವಾಗಿದೆ ಎಂದು ರಾಜೇಶ್ ನಾಯ್ಕ್ ಹೇಳಿದ್ದಾರೆ. 

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶಾಸಕರು, ನಾನು ಕಾನೂನು ವ್ಯಾಪ್ತಿಯಲ್ಲೇ ವ್ಯವಹಾರ ನಡೆಸುತ್ತಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯ ಬೇರೆ ಬೇರೆ ಕಡೆ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಎಲ್ಲದರ ಬಗ್ಗೆಯೂ ತನಿಖೆ ನಡೆಯಲಿ. ಯಾವ ದಾಖಲೆ ಬೇಕಾದರೂ ಗಣಿ ಇಲಾಖೆ ಮೂಲಕ ಸಿಗುತ್ತದೆ. ನನಗೆ ರಾಜಕೀಯ ಮುಖ್ಯವಲ್ಲ. ಕೃಷಿ ಮಾಡಿ ಬದುಕುತ್ತೇನೆ. ಹಾಗೆಂದು ಅಡ್ಡಗೋಡೆ ಮೇಲೆ ದೀಪ ಇಟ್ಟು ತೇಜೋವಧೆ ಮಾಡಬಾರದು. ಅಕ್ರಮದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಒತ್ತಾಯಿಸುವವರಲ್ಲಿ ನಾನು ಕೂಡ ಒಬ್ಬ ಎಂದು ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಎಂಎಲ್ಸಿ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.