ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm