ಬ್ರೇಕಿಂಗ್ ನ್ಯೂಸ್
30-01-23 06:33 pm Mangalore Correspondent ಕರಾವಳಿ
ಉಳ್ಳಾಲ, ಜ.30 : ಕೊಲ್ಯದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸೋಮವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಹಿದಾಯತ್ ನಗರ ನಿವಾಸಿ ಬಾಷರ್ ಅಹಮ್ಮದ್ (22)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯುವಕ. ಭಾನುವಾರ ರಾತ್ರಿ ರಾ.ಹೆ. 66ರ ಕೊಲ್ಯ ಸಮೀಪದ ಅಡ್ಕದಲ್ಲಿ ಮಂಗಳೂರಿನಿಂದ ತಲಪಾಡಿಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಜ್ಜುಗುಜ್ಜಾಗಿತ್ತು. ಡಿಕ್ಕಿಯ ತೀವ್ರತೆಗೆ ಕಬ್ಬಿಣದ ವಿದ್ಯುತ್ ಕಂಬವೇ ಧರೆಗುರುಳಿತ್ತು. ಪರಿಣಾಮ ಸ್ಥಳದಲ್ಲಿಯೇ ಕಾರು ಚಾಲಕ ಮಂಜೇಶ್ವರ ಉದ್ಯಾವರದ ಹತ್ತನೇ ಮೈಲು ನಿವಾಸಿ ಅಬ್ದುಲ್ ರಿಫಾಯಿ(24) ಮೃತಪಟ್ಟಿದ್ದ.
ಸೋಮವಾರ ಮೃತಪಟ್ಟ ಬಾಷರ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದ. ಜ.28 ರಂದು ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ಚಿಕ್ಕಪ್ಪನ ಪುತ್ರ ಬಾಷರ್ ಜೊತೆಗೆ ಆತನ ಸಹಪಾಠಿಗಳಾದ ಫಾತಿಮಾ ಹಾಗೂ ರೇವತಿ ಜತೆ ಮಂಗಳೂರಿನಿಂದ ತಲಪಾಡಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಜಾಗರೂಕತೆ, ನಿರ್ಲಕ್ಷ್ಯದ ಚಾಲನೆಯಿಂದಾಗಿ ಘಟನೆ ಸಂಭವಿಸಿದೆ. ಅಬ್ದುಲ್ ರಿಫಾಯಿ ಕಟ್ಟಡ ಗುತ್ತಿಗೆದಾರ ಸಯ್ಯದ್ ಎಂಬವರ ಪುತ್ರನಾಗಿದ್ದ. ರಿಫಾಯಿ ವಿದೇಶದಿಂದ ಬಂದ ಖುಷಿಯಲ್ಲಿ ಸಹೋದರ ಬಾಷರ್ ಮತ್ತು ಸಹಪಾಠಿಗಳೊಂದಿಗೆ ನಿನ್ನೆ ಒಟ್ಟಾಗಿದ್ದರು. ಕಾರಿನಲ್ಲಿದ್ದ ವಿದ್ಯಾರ್ಥಿನಿಯರಾದ ರೇವತಿ ಹಾಗೂ ಫಾತಿಮಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲ್ಯದಲ್ಲಿ ಭೀಕರ ಅಪಘಾತ ; ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಕಾರು, ಚಾಲಕ ಸಾವು
Kolya accident , another injured dies in hospital, two dead in Ghastly crash. In a horrific car accident that occured in NH 66 in Kolya on Sunday, January 27, a man was killed, another seriously injured while two young women escaped with minor injuries. The accident occured near Kolya-Adka.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm