ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.


ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.


ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm