ಬ್ರೇಕಿಂಗ್ ನ್ಯೂಸ್
04-02-23 02:28 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಹಳೆಯಂಗಡಿ - ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮಂಗಳವಾರ ಮಧ್ಯರಾತ್ರಿ ಹಿಟ್ ಆಂಡ್ ರನ್ ಗೆ ಇಬ್ಬರು ಬಲಿಯಾದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ‘ಮ್ಯಾಡ್ ಇನ್ ಕುಡ್ಲ’ ಹೆಸರಿನ ಯೂಟ್ಯೂಬರ್ ಹಳೆಯಂಗಡಿ ಇಂದಿರಾ ನಗರ ನಿವಾಸಿ ಅರ್ಪಿತ್ (35) ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಕಾರು ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದು ಆತ ಜಾಮೀನು ಪಡೆದಿರುವ ಮಾಹಿತಿ ಲಭಿಸಿದೆ.
ಮೊನ್ನೆ ಮಂಗಳವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಮಧ್ಯಪ್ರದೇಶದಿಂದ ಕೇರಳ ಕಡೆಗೆ ತೆರಳುತ್ತಿದ್ದ ಲಾರಿ ಮೂಲ್ಕಿ ಬಳಿಯ ಪಡು ಪಣಂಬೂರಿನಲ್ಲಿ ಟೈರ್ ಪಂಕ್ಚರ್ ಆಗಿತ್ತು. ಹೆದ್ದಾರಿ ಬದಿ ಲಾರಿಯನ್ನು ನಿಲ್ಲಿಸಿ ಟೈರ್ ಚೇಂಜ್ ಮಾಡುತ್ತಿದ್ದಾಗ ಆರೋಪಿ ಅರ್ಪಿತ್ ಚಲಾಯಿಸ್ತಿದ್ದ ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ತೀರಾ ಎಡಗಡೆಗೆ ಬಂದು ಅಲ್ಲಿದ್ದವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಮಧ್ಯಪ್ರದೇಶ ಮೂಲದ ಬಬ್ಲು (23) ಮತ್ತು ಅಚಲ್ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೃತರ ಶವದ ಭಾಗಗಳು ಹೆದ್ದಾರಿ ತುಂಬಾ ಚೆಲ್ಲಾಡಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಘಟನೆಯಲ್ಲಿ ಕೇರಳ ನಿವಾಸಿ ಅನೀಶ್(42) ಗಂಭೀರ ಗಾಯಗೊಂಡಿದ್ದರು.
ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಪೊಲೀಸರು ಆರೋಪಿಯನ್ನು ಸೆರೆಹಿಡಿದು ಸೂಕ್ತ ಸೆಕ್ಷನ್ ಹಾಕದೆ ಕೋರ್ಟಿಗೆ ಹಾಜರುಪಡಿಸಿ ಆತನಿಗೆ ಜಾಮೀನು ಸಿಗುವಂತೆ ಮಾಡಿದ್ದಾರೆ. ಇತ್ತೀಚೆಗೆ ರಾಜಧಾನಿ ದೆಹಲಿಯಲ್ಲಿ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಯುವತಿಯನ್ನು ಎಳೆದೊಯ್ದಿದ್ದು ಭಾರೀ ಸಂಚಲನ ಮೂಡಿಸಿತ್ತು. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಈ ಹಿಂದೆ ನಟ ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದೂ ಇದೆ. ಆದರೆ ಮಂಗಳೂರು ಪೊಲೀಸರು ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಎದ್ದು ಕಾಣುತ್ತದೆ. ಆರೋಪಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿರುವ ಸಾಧ್ಯತೆಯಿದ್ದು ಇಬ್ಬರು ದಾರುಣ ಸಾವು ಕಂಡಿದ್ದರೂ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಲ್ಲ.
ಪ್ರಕರಣದ ಬಗ್ಗೆ ಸುರತ್ಕಲ್ ಸಂಚಾರಿ ಪೊಲೀಸರಲ್ಲಿ ಕೇಳಿದಾಗ, ಆರೋಪಿ ವಿರುದ್ಧ ನಿರ್ಲಕ್ಷ್ಯದ ಚಾಲನೆ ಬಗ್ಗೆ ಕೇಸು ದಾಖಲು ಮಾಡಿದ್ದೇವೆ. ಅದು ಠಾಣೆಯಲ್ಲಿ ಜಾಮೀನು ನೀಡಬಹುದಾದ ಪ್ರಕರಣ ಆಗಿರುವುದರಿಂದ ಸ್ಟೇಶನ್ ಬೈಲ್ ನೀಡಿ ಕಳಿಸಿದ್ದೇವೆ ಎಂದಿದ್ದಾರೆ. ಮರ್ಡರ್ ಕೇಸ್ ಯಾಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ, ಆತನ ಉದ್ದೇಶ ಕೊಲೆ ಮಾಡುವುದು ಆಗಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. ಕಾರು ಚಾಲಕ ಇಬ್ಬರನ್ನು ಬಲಿ ಪಡೆದರೂ, ಕೇಸನ್ನು ಎಷ್ಟು ಸೌಮ್ಯವಾಗಿಸಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ.
Mangalore Hit and run accident two killed on spot, mad in kudla Arpit arrested and granted station bail by the traffic police in surathkal even after killing two. Arpith indravadan runs a YouTube channel called mad in kudla and was working as a radio jockie before.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm