ಬ್ರೇಕಿಂಗ್ ನ್ಯೂಸ್
05-02-23 12:37 pm Mangalore Correspondent ಕರಾವಳಿ
ಉಳ್ಳಾಲ, ಫೆ.5 : ಉಳ್ಳಾಲ ಕೋಟೆಪುರದ ಫಿಶ್ ಮೀಲ್ ಫ್ಯಾಕ್ಟರಿಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿಯ ಟಯರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದ್ದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಾರಿ ಚಾಲಕ ಸಾದಿಕ್ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮೀಲ್ ಫ್ಯಾಕ್ಟರಿಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋದ ಟಯರ್ ಸಿಡಿದು ಉರುಳಿ ಬಿದ್ದಿದೆ. ಮಂಗಳೂರಿನಿಂದ ಉಳ್ಳಾಲಕ್ಕೆ ಚಲಿಸುತ್ತಿದ್ದ ಟೆಂಪೊ ಮತ್ತೆ ಮಂಗಳೂರಿನತ್ತ ಮುಖ ಮಾಡಿ ಪಲ್ಟಿ ಹೊಡೆದಿದೆ. ಘಟನೆ ವೇಳೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ದಂಪತಿ ಕೂದಳೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೆದ್ದಾರಿ ಸಂಚಾರದಲ್ಲಿ ಕೆಲ ಕಾಲ ಅಡಚಣೆಯುಂಟಾಗಿ ಸ್ಥಳಕ್ಕೆ ಬಂದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಪಲ್ಟಿ ಬಿದ್ದ ಟೆಂಪೊ ತೆರವು ಕಾರ್ಯಾಚರಣೆ ನಡೆಯುತ್ತಿದೆ.
Mangalore Tyre blast tempo carrying fish topples at kallapu near thokottu.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm