ಬ್ರೇಕಿಂಗ್ ನ್ಯೂಸ್
11-02-23 10:33 pm Mangalore Correspondent ಕರಾವಳಿ
ಮಂಗಳೂರು, ಫೆ.11: ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಬಲ ಆಗಿರುವ ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳ ಪ್ರತಿನಿಧಿಗಳ ಸಭೆ ಮಂಗಳೂರಿನ ಏರ್ಪೋರ್ಟ್ ಬಳಿಯ ಶ್ರೀದೇವಿ ಕಾಲೇಜಿನಲ್ಲಿ ನಡೆದಿದೆ. ಸಭೆಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಾಗುವಂತೆ ಅಮಿತ್ ಷಾ ಸೂಚನೆ ನೀಡಿದ್ದಾರೆ.
ಸಭೆಯ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆ ಹತ್ತಿರ ಬಂದಿದ್ದು, ಮುಖಂಡರು ಸೇರಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತೊಡಗಬೇಕು. ಒಂದು ತಿಂಗಳ ಕಾಲ ಕಾಲಾವಕಾಶವಿದ್ದು, ಹಳ್ಳಿ ಹಳ್ಳಿಗಳಿಗೆ, ಮನೆ ಮನೆಗೂ ಹೋಗಬೇಕು. ಆಬಳಿಕ ತಾನು ಮತ್ತೊಂದು ಬಾರಿ ನಿಮ್ಮೊಂದಿಗೆ ಮಾತನಾಡುತ್ತೇನೆ. ಎಲ್ಲರೂ ಪಕ್ಷ ಕಟ್ಟುವ ಕಾರ್ಯದಲ್ಲಿ ತೊಡಗಿಸಬೇಕು. ನಿಶ್ಚಿತವಾಗಿ ನಾವು ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಸಂಶಯವಿಲ್ಲ ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆಂದು ಯಡಿಯೂರಪ್ಪ ಹೇಳಿದರು.
ಸಚಿವ ಸುನಿಲ್ ಕುಮಾರ್ ಮಾತನಾಡಿ, ಎರಡು ವಿಭಾಗದ ಆರು ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖರ ಸಭೆ ನಡೆದಿದೆ. 33 ವಿಧಾನಸಭಾ ಕ್ಷೇತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗಿದೆ. 33 ಕ್ಷೇತ್ರಗಳನ್ನೂ ಗೆಲ್ಲುವ ಸೂತ್ರಗಳನ್ನ ನಮ್ಮ ಮುಂದೆ ಇಟ್ಟಿದ್ದಾರೆ. ಈ ಬಾರಿ ಪೂರ್ಣ ಬಹುಮತದ ಬಿಜೆಪಿ ಸರಕಾರ ರಚನೆ ಅಗಬೇಕು. ಈಗ 29 ರಲ್ಲಿ ಬಿಜೆಪಿ ಶಾಸಕರಿದ್ದರೆ 4 ಕಾಂಗ್ರೆಸ್ ಕೈಯಲ್ಲಿದೆ. ಉಳಿದ ನಾಲ್ಕು ಕ್ಷೇತ್ರಗಳನ್ನೂ ಗೆಲ್ಲುವ ಕುರಿತ ಚರ್ಚೆ ನಡೆದಿದೆ ಎಂದು ತಿಳಿಸಿದರು.
ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾರವಾರ, ಶಿವಮೊಗ್ಗ, ಕೊಡಗು ಸೇರಿದಂತೆ ಆರು ಜಿಲ್ಲೆಗಳ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್ ಸೇರಿದಂತೆ ಆರು ಜಿಲ್ಲೆಗಳ ಶಾಸಕರು, ಬಿಜೆಪಿಯ ಮುಖಂಡರು ಭಾಗಿಯಾಗಿದ್ದರು. ಸಭೆಗೂ ಮುನ್ನ ಕೆಂಜಾರಿನಲ್ಲಿ ತೆರೆದ ವಾಹನದಲ್ಲಿ ಅಮಿತ್ ಷಾ, ಯಡಿಯೂರಪ್ಪ, ಸಿಎಂ ಬೊಮ್ಮಾಯಿ ರೋಡ್ ಶೋ ನಡೆಸಿದರು.
6 districts, 33 constituencies of Karnataka state is the target for BJPs Victory, Amit Shah hidden meeting in Mangalore. Speaking to Media former CM Yediyurappa stated that every leader must be involved in active campaigning of parties in every corner of the state.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm