ಸುಬ್ರಹ್ಮಣ್ಯ ಬಳಿ ಭೀಕರ ಅಪಘಾತ ; ಮಗು ಸಾವು, ಬೆಂಗಳೂರು ಮೂಲದ ನಾಲ್ವರು ಗಂಭೀರ 

13-02-23 04:33 pm       Mangalore Correspondent   ಕರಾವಳಿ

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ. 

ಪುತ್ತೂರು, ಫೆ.13 : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ನಡೆದಿದೆ. 

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದೆ‌. ಮಗುವಿಗೆ ಗಂಭೀರ ಏಟು ಬಿದ್ದು ಪ್ರಾಣ ಕಳಕೊಂಡಿದೆ.

Accident near Subramanya between KSRTC Bus and car, baby dies on spot, four injured.