ಬ್ರೇಕಿಂಗ್ ನ್ಯೂಸ್
21-10-20 10:21 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 21: ಪಚ್ಚನಾಡಿ ದುರಂತದ ಬಗ್ಗೆ ಹೈಕೋರ್ಟ್ ಛಾಟಿಯಿಂದ ಎಚ್ಚೆತ್ತ ರಾಜ್ಯ ಸರಕಾರ ನಗರಾಭಿವೃದ್ಧಿ ಇಲಾಖೆ ಮೂಲಕ ಸಂತ್ರಸ್ತರಿಗೆ ಪರಿಹಾರ ನೀಡಲು 14 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಭಾರಿ ಮಳೆಯಿಂದಾಗಿ ಕಳೆದ ವರ್ಷ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಹಾಗೂ ಕುಡುಪು ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭೂ ಕುಸಿತ ಉಂಟಾಗಿತ್ತು. ಇದರಿಂದ ಮಂದಾರ ಪ್ರದೇಶದ 35 ಕುಟುಂಬಗಳ ಮನೆ, ಕೃಷಿ ಭೂಮಿ ನಾಶವಾಗಿ ಅಲ್ಲಿನ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದರು. ಬೀದಿ ಪಾಲಾಗಿದ್ದ ಸಂತ್ರಸ್ತರಿಗೆ ಪರಿಹಾರ ನೀಡಲು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಆದರೆ, ಮಹಾನಗರ ಪಾಲಿಕೆಯಿಂದ ಪರಿಹಾರ ನೀಡುವ ವ್ಯವಸ್ಥೆ ಆಗಿರಲಿಲ್ಲ. ಸಂತ್ರಸ್ತರಿಗೆ ಕುಲಶೇಖರದಲ್ಲಿ ಉಳಕೊಳ್ಳಲು ವ್ಯವಸ್ಥೆ ಮಾಡಿದ್ದರೆ ವಿನಾ ಪರಿಹಾರದ ವ್ಯವಸ್ಥೆಗೆ ಮುಂದಾಗಿರಲಿಲ್ಲ. ಹೀಗಾಗಿ ಸಂತ್ರಸ್ತರ ಪರವಾಗಿ ಕಾನೂನು ಸೇವೆಗಳ ಪ್ರಾಧಿಕಾರದಿಂದ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಹೈಕೋರ್ಟ್ ಕಳೆದ ಅ.12ರಂದು ಮಹಾನಗರ ಪಾಲಿಕೆ ಮತ್ತು ರಾಜ್ಯ ಸರಕಾರಕ್ಕೆ ಛಾಟಿ ಬೀಸಿದ್ದು ಪಾಲಿಕೆಯ ಆಸ್ತಿಯನ್ನು ಅಡವಿಟ್ಟಾದ್ರೂ ತಕ್ಷಣವೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಈ ದುರಂತ ಸಂಭವಿಸಿದೆ. ರಾಜ್ಯ ಸರಕಾರವೂ ಇಲ್ಲಿ ಮೂಕ ಪ್ರೇಕ್ಷಕನಾಗುವಂತಿಲ್ಲ ಎಂದು ಸೂಚನೆ ನೀಡಿತ್ತು.

ಹೈಕೋರ್ಟ್ ನಲ್ಲಿ ಮುಖಭಂಗ ಅನುಭವಿಸಿದ್ದ ಮಹಾನಗರ ಪಾಲಿಕೆಯ ಆಡಳಿತ ಈಗ ಶಾಸಕರು ಮತ್ತು ಸಂಸದರ ಮೂಲಕ ಪ್ರಯತ್ನ ಮಾಡಿ, ತ್ವರಿತವಾಗಿ ಹಣ ಬಿಡುಗಡೆ ಮಾಡಲು ಯಶಸ್ವಿಯಾಗಿದೆ.
ಸಂತ್ರಸ್ತರಿಗೆ ಅಂದಾಜು 20 ಕೋಟಿ ಪರಿಹಾರ ಪಾವತಿಸುವಂತೆ ಕಳೆದ ಬಾರಿ ಸರಕಾರಕ್ಕೆ ಮನವಿಯನ್ನು ಮಾಡಲಾಗಿತ್ತು. ರಾಜ್ಯ ಸರಕಾರ ಈಗ ಎಸ್.ಎಫ್.ಸಿ 2019-20ನೇ ಸಾಲಿನ ವಿಶೇಷ ಅನುದಾನದಿಂದ 14 ಕೋಟಿ ಹಣ ಬಿಡುಗಡೆಗೊಳಿಸಿದೆ. ಈ ಹಿಂದೆಯೇ ರಾಜ್ಯ ಸರಕಾರದಿಂದ 8 ಕೋಟಿ ಅನುದಾನ ಬಿಡುಗಡೆಗೊಳಿಸಿತ್ತು. ಇದೀಗ ಒಟ್ಟು 22 ಕೋಟಿ ರೂಪಾಯಿ ಅನುದಾನ ಲಭಿಸಿದಂತಾಗಿದೆ. ಈ ಪೈಕಿ, ಸಂತ್ರಸ್ತರಿಗೆ ಎಷ್ಟು ಪಾಲು ಸಿಗುತ್ತದೋ ಕಾದು ನೋಡಬೇಕು.
14 Crores released as compensation for families affected by landslide in Pachanady, Mangalore. Recently The state HC had directed the state government to permit MCC to pledge its fixed assets and raise loan from the bank to pay compensation to families affected by the landslide at the Pachanady dumping yard last year.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm