ಬ್ರೇಕಿಂಗ್ ನ್ಯೂಸ್
22-02-23 09:12 pm Mangalore Correspondent ಕರಾವಳಿ
ಬಂಟ್ವಾಳ, ಫೆ.22: ಶಾಲಾಡಳಿತದ ಅನುಮತಿ ಪಡೆಯದೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಮುಸ್ಲಿಂ ಸಂಘಟನೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ಕಳುಹಿಸಿಕೊಟ್ಟಿದ್ದ ಆರೋಪದಲ್ಲಿ ವಿಟ್ಲದ ಅಡ್ಯನಡ್ಕ ಜನತಾ ಶಾಲೆಯ ಮುಖ್ಯ ಶಿಕ್ಷಕ ಟಿ. ಆರ್ ನಾಯ್ಕ್ ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ.
ಫ.18ರಂದು ಶಿವರಾತ್ರಿಯ ದಿನ ಶಾಲೆಗೆ ರಜೆ ಇದ್ದರೂ, ಅಡ್ಯನಡ್ಕ ಬಳಿಯ ಖಾಸಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ತೆರಳುವಂತೆ ಶಿಕ್ಷಕರು ಸೂಚಿಸಿದ್ದರು ಎನ್ನಲಾಗಿದೆ. ಮುಸ್ಲಿಂ ಯಂಗ್ ಮನ್ ಅಸೋಸಿಯೇಶನ್ಸ್ ಕಾರ್ಯಾಗಾರ ನಡೆಸಿದ್ದರು. ಕಾರ್ಯಾಗಾರದಲ್ಲಿ ಒಬ್ಬನೇ ದೇವರು, ಪರೀಕ್ಷೆ ಪಾಸ್ ಆಗಲು ಚೆನ್ನಾಗಿ ಓದಬೇಕು, ದೇವರನ್ನು ಬೇಡಿಕೊಂಡರೆ ಪಾಸ್ ಆಗುವುದಿಲ್ಲ ಇತ್ಯಾದಿ ಮಾತುಗಳನ್ನು ಹೇಳಿದ್ದಾಗಿ ವಿದ್ಯಾರ್ಥಿಗಳು ಹಿಂದು ಸಂಘಟನೆಯ ಗಮನಕ್ಕೆ ತಂದಿದ್ದರು.
ಅದರಂತೆ, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ, ಹಿಂದು ವಿದ್ಯಾರ್ಥಿಗಳನ್ನು ಹೊರಕ್ಕೆ ಕಳುಹಿಸಿದ್ದರು. ಅಲ್ಲದೆ, ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿ ಪ್ರಕರಣ ದಾಖಲಿಸುವಂತೆ ಒತ್ತಡ ಹೇರಿದ್ದರು. ಈ ಬಗ್ಗೆ ಪೋಷಕರೊಬ್ಬರ ದೂರಿನಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿಕ್ಷಕ ಟಿ. ಆರ್ ನಾಯ್ಕ್, ಕಾರ್ಯಾಗಾರ ಆಯೋಜಿಸಿದ್ದ ರಫೀಕ್ ಮಾಸ್ಟರ್ ಆತೂರು ಮತ್ತು ಮುಸ್ಲಿಂ ಯಂಗ್ ಮನ್ ಅಸೋಸಿಯೇಶನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಶಿಕ್ಷಕನಿಗೆ ಹಿಂದು ಸಂಘಟನೆಯ ಬೆದರಿಕೆ ಇದ್ದುದರಿಂದ ಅವರನ್ನು ವಿಟ್ಲ ಠಾಣೆಗೆ ಕರೆಸಿ ಆ ದಿನ ರಾತ್ರಿಯಿಡೀ ಇರಿಸಿಕೊಳ್ಳಲಾಗಿತ್ತು. ಮರುದಿನ ಪೊಲೀಸರು ಬಿಟ್ಟು ಕಳುಹಿಸಿದ್ದರು. ಶೈಕ್ಷಣಿಕ ಕಾರ್ಯಾಗಾರಕ್ಕೆ ನುಗ್ಗಿ ಹಿಂದು ಸಂಘಟನೆಯ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆಂದು ಘಟನೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಎತ್ತಿದ್ದ ಶಾಸಕ ಯುಟಿ ಖಾದರ್, ಹಿಂದು ಸಂಘಟನೆ ಕಾರ್ಯಕರ್ತರು ಗೂಂಡಾಗಾರಿ ನಡೆಸಿದ್ದಾರೆಂದು ಆರೋಪಿಸಿದ್ದರು. ಅಧಿವೇಶನದಲ್ಲಿ ಖಾದರ್ ರಾಜ್ಯ ಸರಕಾರದ ವಿರುದ್ಧ ಪ್ರಶ್ನೆ ಮಾಡಿದ್ದರಿಂದ ಶಿಕ್ಷಣ ಸಚಿವ ಬಿಸಿ ನಾಗೇಶ್, ಆರೋಪಿತ ಶಿಕ್ಷಕನನ್ನು ಅಮಾನತು ಮಾಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣಾಧಿಕಾರಿಗಳ ಸೂಚನೆಯಂತೆ, ಅನುದಾನಿತ ಜನತಾ ಪ್ರೌಢಶಾಲೆಯ ಆಡಳಿತ ಕಾರ್ಯದರ್ಶಿ ಆರೋಪಿತ ಶಿಕ್ಷಕನನ್ನು ಅಮಾನತುಗೊಳಿಸಿ ಬುಧವಾರ ಆದೇಶ ಮಾಡಿದ್ದಾರೆ.
Mangalore religious teaching during an educational program at Vitla school, Headmaster Ravindra Nayak suspended. A private high school head master and two others were booked for alleged religious teaching at Adyanadka under Vitla police station limits in Dakshina Kannada district
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm