ಬ್ರೇಕಿಂಗ್ ನ್ಯೂಸ್
22-10-20 06:03 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 22: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಸಂಬಂಧಪಟ್ಟವರಿಗೆ ಶೋಕಾಸ್ ನೊಟೀಸ್ ನೀಡಲಾಗಿಲ್ಲ. ಇಂದೇ ಶೋಕಾಸ್ ನೊಟೀಸ್ ನೀಡಿ ಒಂದು ವಾರದೊಳಗೆ ಉತ್ತರ ಪಡೆಯುವಂತೆ ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಸೂಚನೆ ನೀಡಿದ್ದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಮೂಲಕ ಶ್ಯಾಮಲಾ ಕುಂದರ್ ಈ ಮಾಹಿತಿ ನೀಡಿದ್ದಾರೆ. ನೊಂದ ಮಹಿಳೆಯರಿಗೆ ತ್ವರಿತವಾಗಿ ನ್ಯಾಯ ಕೊಡಿಸಲು ಸರಕಾರದ ಇಲಾಖೆಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದು ಹೇಳಿದ ಕುಂದರ್, ವಿವಿಧ ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಯರಿಗೆ ಸಕಾಲದಲ್ಲಿ ನ್ಯಾಯ ಒದಗಿಸಿಕೊಡಬೇಕು. ಇದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ನಿನ್ನೆ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೊಂದಿಗೆ ಸಂವಾದ ನಡೆಸಿದ್ದು, ಸೈಬರ್ ಕ್ರೈಂ ಮತ್ತು ಮಹಿಳಾ ಹಕ್ಕುಗಳ ಬಗ್ಗೆ ಜನಜಾಗೃತಿ ಮೂಡಿಸುವುದು, ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಂಬಂಧಿ ಪ್ರಕರಣಗಳಿಗೆ ಕೂಡಲೇ ಸ್ಪಂದಿಸುವಂತೆ ಸೂಚಿಸಿರುವುದಾಗಿ ಶ್ಯಾಮಲಾ ಕುಂದರ್ ತಿಳಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಅನಂತರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
Show cause notice ordered against accused Professor over sexual assault case states Member of National Commission for Women (NCW) Shyamala S Kunder in Mangalore.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm