ಬ್ರೇಕಿಂಗ್ ನ್ಯೂಸ್
01-03-23 09:29 pm Mangalore Correspondent ಕರಾವಳಿ
ಮಂಗಳೂರು, ಮಾ.1 : ಹಣಕ್ಕಾಗಿ ವೃದ್ಧರೊಬ್ಬರನ್ನು ಯುವಕರು ಸೇರಿ ಇರಾ ಬಳಿಯ ನಿರ್ಜನ ಪ್ರದೇಶದಲ್ಲಿ ಹತ್ಯೆಗೈದು ಹೂತಿಟ್ಟ ಪ್ರಕರಣದಲ್ಲಿ ಐವರು ಆರೋಪಿಗಳ ಅಪರಾಧ ನ್ಯಾಯಾಲಯದಲ್ಲಿ ಸಾಬೀತಾಗಿದೆ, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಈ ಬಗ್ಗೆ ತೀರ್ಪು ನೀಡಿರುವ ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾತಿ, ಶಿಕ್ಷೆ ಪ್ರಮಾಣವನ್ನು ಮಾರ್ಚ್ 3ನೇ ತಾರೀಕಿಗೆ ಕಾಯ್ದಿರಿಸಿದ್ದಾರೆ. ತೊಕ್ಕೊಟ್ಟು ಬಳಿಯ ಮಲಾರ್ ಗ್ರಾಮದ ಪಲ್ಲಿಯಬ್ಬ ಎಂಬ ವ್ಯಕ್ತಿಯನ್ನು ಹಣಕ್ಕಾಗಿ ಕತ್ತು ಹಿಸುಕಿ ಕೊಲ್ಲಲಾಗಿತ್ತು. ವ್ಯಕ್ತಿ ಕಾಣೆಯಾದ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿದ್ದರು. ಪೋಲೀಸರು ತನಿಖೆ ನಡೆಸಿದಾಗ ಕೊಲೆ ಎಂದು ಸಾಬೀತಾಗಿತ್ತು. ಮಲಾರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.
ಪಾವೂರು ಗ್ರಾಮದ ಮಲಾರ್‌ನಿಂದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಪಲ್ಲಿಯಬ್ಬ ಎಂಬವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ಹತ್ಯೆಗೈದು ಹೂತು ಹಾಕಲಾಗಿತ್ತು ಎಂದು ಕೊಣಾಜೆ ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು. ಎರಡೇ ವರ್ಷದಲ್ಲಿ ವಿಚಾರಣೆ ಪೂರ್ತಿಗೊಳಿಸಿದ ನ್ಯಾಯಾಲಯ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ.
Mangalore 70-year-old Palliabba Murder Case, court finds all the five accused guilty . The body of a 70-year-old man had gone missing from Malar and was found buried in Ira. The deceased was Palliabba alias Palliyaka (70) a resident of Arastan, Malar.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm