ಬ್ರೇಕಿಂಗ್ ನ್ಯೂಸ್
04-03-23 08:23 pm Mangalore Correspondent ಕರಾವಳಿ
ಮಂಗಳೂರು, ಮಾ.4: ಗ್ಯಾಸ್ ಸಿಲಿಂಡರ್ ಬೆಲೆಯನ್ನು ವಿಪರೀತವಾಗಿ ಹೆಚ್ಚಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗ್ಯಾಸ್ ಸಿಲಿಂಡರ್ ಬದಲು ರಸ್ತೆಯ ಮಧ್ಯೆ ಒಲೆಯನ್ನು ಉರಿಸಿ, ಮಹಿಳಾ ಕಾರ್ಯಕರ್ತರು ಅದರಲ್ಲಿ ಚಪಾತಿ ಕಾಯಿಸಿದ್ದಾರೆ. ಆಮೂಲಕ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಅಣಕಿಸಿ ಘೋಷಣೆ ಕೂಗಿದ್ದಾರೆ. ಬಿಜೆಪಿ ಸರಕಾರಕ್ಕೆ ಧಿಕ್ಕಾರ ಘೋಷಣೆ ಕೂಗುತ್ತಲೇ ಈ ಹಿಂದೆ ಗ್ಯಾಸ್ ಸಿಲಿಂಡರಿಗೆ 450 ರೂ. ಆದಾಗ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಸಿಲಿಂಡರನ್ನು ಹೊತ್ತಿಕೊಂಡು ಬಂದು ಪ್ರತಿಭಟನೆ ನಡೆಸಿದ್ದರು. ಈಗ ಗ್ಯಾಸ್ ಬೆಲೆ 1150 ರೂಪಾಯಿ ಆಗಿದೆ. ಈಗ ಯಾಕೆ ಶೋಭಕ್ಕ ಮಾತನಾಡುತ್ತಿಲ್ಲ. ಪ್ರತಿಭಟನೆ ಮಾಡೋದಿಲ್ಲ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.



ಹಿಂದೆ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಪ್ರತಿಭಟನೆ ನಡೆಸಿದ್ದ ಫೋಟೋಗಳನ್ನು ಭಿತ್ತಿಪತ್ರಗಳಲ್ಲಿ ತೋರಿಸಿ ಅಣಕಿಸಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಪರಿಷತ್ ಸದಸ್ಯ ಐವಾನ್ ಡಿಸೋಜ, ಇದು ಎರಡು ಚಪಾತಿಯಲ್ಲಿ ಒಂದು ಮೋದಿಗೆ, ಇನ್ನೊಂದು ಸಿಎಂ ಬೊಮ್ಮಾಯಿಗೆ ಕಳಿಸಲಾಗುವುದು. ಚಪಾತಿ ಬೇಯಿಸಬೇಕಿದ್ದರೆ ಎಷ್ಟು ಒಲೆ ಸುಡುವ ಕೆಲಸ ಮಾಡಬೇಕು. ಇದರಿಂದ ಎಷ್ಟರಮಟ್ಟಿಗೆ ಕೈ ಸುಟ್ಟುಕೊಳ್ಳುವ ಸ್ಥಿತಿ ಜನರಿಗೆ ಆಗಿದೆ ಎಂಬುದನ್ನು ತಿಳಿಸುತ್ತೇವೆ. ಇಲ್ಲಿ ಹಾಕಿರುವ ಕಟ್ಟಿಗೆ ಅಮಿತ್ ಷಾನಿಗೆ ಎಂದು ಹೇಳಿ ಅಣಕಿಸಿದರು.



ಜಿಲ್ಲಾ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಜನರ ಕಷ್ಟ ಬಿಜೆಪಿ ಸರಕಾರಕ್ಕೆ ತಿಳಿಯುತ್ತಿಲ್ಲ. ಬಿಜೆಪಿ ಶಾಸಕರು ನಲ್ವತ್ತು ಪರ್ಸೆಂಟ್ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಒಲೆಯಲ್ಲಿ ಸುಟ್ಟು ಹೋದ ಚಪಾತಿಯನ್ನು ಮೋದಿ ಮತ್ತು ಅಮಿತ್ ಷಾಗೆ ಕಳಿಸಿಕೊಟ್ಟು ಜನರ ಸ್ಥಿತಿಯೂ ಬೆಂದು ಹೋಗಿದೆ ಎನ್ನುವುದನ್ನು ತಿಳಿಸುತ್ತೇವೆ ಎಂದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಲೆಟ್ ಪಿಂಟೋ ಸೇರಿದಂತೆ ಹಲವಾರು ಕಾರ್ಯಕರ್ತರು ಸೇರಿದ್ದರು.
Mangalore Congress leaders staged a noisy protest on Wednesday against the steep hike in cooking gas prices for domestic and commercial users and demanded a rollback.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm