ಬ್ರೇಕಿಂಗ್ ನ್ಯೂಸ್
12-03-23 10:48 pm Mangalore Correspondent ಕರಾವಳಿ
ಮಂಗಳೂರು, ಮಾ.12 : ನಾವು ಅಭಿವೃದ್ಧಿ ಮತ್ತು ಹಿಂದುತ್ವದ ಹೆಸರಿನಲ್ಲಿ ಮತ ಕೇಳುತ್ತೇವೆ. ಆದರೆ ಈಗ ಕೆಲವು ಸಮಯಗಳಿಂದ ಕ್ಷೇತ್ರದಲ್ಲಿ ಬಾವಲಿಗಳು ತಿರುಗಾಡುತ್ತಿವೆ, ಕೋಲ, ನೇಮದ ಹೆಸರಲ್ಲಿ ಬಾವ.. ಅಲಿ ಸುತ್ತಾಟ ಆರಂಭಿಸಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆ.
ಕಾವೂರಿನ ಶಾಂತಿನಗರ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರ ಹೆಸರೆತ್ತದೆ ಒಬ್ಬನಲ್ಲಿ ದುಡ್ಡಿದೆಯಂತೆ, ಇನ್ನೊಬ್ಬನಲ್ಲಿ ಚೆಕ್ ಬೌನ್ಸ್ ಮಾಡುವ ಕೆಪ್ಯಾಸಿಟಿ ಇದೆಯಂತೆ. ದೇವಸ್ಥಾನ, ಕೋಲ, ನೇಮೋತ್ಸವ, ಯಕ್ಷಗಾನ ಎಲ್ಲಾ ಕಡೆ ಹೋಗಿ ಪ್ರಸಾದ ಸ್ವೀಕರಿಸುತ್ತಾರೆ, ಬಳಿಕ ಕಾಲಡಿಗೆ ಹಾಕ್ತಾರೆ, ಇಲ್ಲಾ ತಮ್ಮ ಕಾರಲ್ಲಿ ಇಡ್ತಾರೆ? ಬಾವಲಿ ಅದರಷ್ಟಕ್ಕೆ ತಿರುಗಾಡುತ್ತಿರಲಿ. ನಾವು ನಮ್ಮ ಅಭಿವೃದ್ಧಿ ಕಾರ್ಯಗಳತ್ತ ಗಮನ ಕೊಡೋಣ ಎನ್ನುವ ಮೂಲಕ ಮೊಯ್ದೀನ್ ಬಾವ, ಇನಾಯತ್ ಆಲಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಈಶ್ವರಪ್ಪ, ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಜಗದೀಶ್ ಶೇಣವ, ಉತ್ತರ ಮಂಡಲಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಮತ್ತಿತರರಿದ್ದರು.
ಸಮಾವೇಶಕ್ಕೂ ಮುನ್ನ ಬೋಂದೆಲ್ ನಿಂದ ಕಾವೂರಿನ ವರೆಗೆ ಕಾರ್ಯಕರ್ತರ ಪಾದಯಾತ್ರೆ ನಡೆಯಿತು. ನೂರಾರು ಮಂದಿ ಪಾಲ್ಗೊಂಡಿದ್ದರು.
Mangalore Mohiuddin Bava trying to gain affection of Hindus by attending Kola says MLA Bharath Shetty.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm