ಬ್ರೇಕಿಂಗ್ ನ್ಯೂಸ್
16-03-23 11:42 am Mangalore Correspondent ಕರಾವಳಿ
ಮಂಗಳೂರು, ಮಾ.16: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂದೀಪ್ ಶೆಟ್ಟಿ ಮೊಗರುಗುತ್ತು (35) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂಧು ಎಂಬ ಹೆಸರಿನ ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು 9 ಮತ್ತು 10ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿ ಸೇವಾ ಸಿಂಧು ಕೇಂದ್ರ ನಡೆಸುತ್ತಿದ್ದರು. ಅವಿವಾಹಿತರಾಗಿದ್ದು ಇನ್ಶೂರೆನ್ಸ್ ಏಜೆಂಟರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಕಚೇರಿಯಲ್ಲಿ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಆರ್ಥಿಕ ಅಡಚಣೆ ಇನ್ನಿತರ ವಿಚಾರಗಳ ಉಲ್ಲೇಖ ಇದೆಯಂತೆ. ಕಂಕನಾಡಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೊಬೈಲಿನಲ್ಲಿ ಗೆಳೆಯರೇ ಕ್ಷಮಿಸಿ ಎಂದು ಸ್ಟೇಟಸ್ ಹಾಕ್ಕೊಂಡಿದ್ದರು. ಸಾಲ ಮಾಡಿಕೊಂಡು ಅದರಿಂದಾಗಿ ಚಿಂತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ.
Ganjimutt Panchyath member commits suicide at his office in Neermarga in Mangalore. The deceased has been identified as Sandeep Shetty (35). Financial crises reason said to be the reason for suicide.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm