ಕಾಂಗ್ರೆಸಿನವರ ಮಾತಿಗೆ ಗ್ಯಾರಂಟಿ ಇಲ್ವಾ ? ಗ್ಯಾರಂಟಿ ಕಾರ್ಡ್ ಯಾಕೆ ಬೇಕು, ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಅಷ್ಟೇ ; ಸಿಎಂ ಬೊಮ್ಮಾಯಿ ಲೇವಡಿ 

16-03-23 01:15 pm       Mangalore Correspondent   ಕರಾವಳಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜ‌ನೆ ಬಗ್ಗೆ ಯಾಕೆ ಹತಾಶೆ ಆಗಬೇಕು.

ಮಂಗಳೂರು, ಮಾ.16 : ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜ‌ನೆ ಬಗ್ಗೆ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅಲ್ಲ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಎಂದು ಹೇಳಿದ್ದಾರೆ. 

ಮಂಗಳೂರಿನ ಹೆಲಿ ಪ್ಯಾಡ್ ನಲ್ಲಿ ಈ ಕುರಿತ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಉತ್ತರಿಸಿದರು. ಸೋಮಣ್ಣ- ಯಡಿಯೂರಪ್ಪ ವೈಮನಸ್ಸಿನ ಕುರಿತ ಪ್ರಶ್ನೆಗೆ, ಸೋಮಣ್ಣ ಮತ್ತು ಯಡಿಯೂರಪ್ಪ ಅವರದ್ದು ತಂದೆ-ಮಗನ ಸಂಬಂಧ. ಅವರು ದೆಹಲಿಗೆ ವೈಯಕ್ತಿಕ ಕಾರಣದಿಂದಷ್ಟೆ ಹೋಗಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವನ್ನು ಅವರು ಹೊಂದಿಲ್ಲ. ಯಡಿಯೂರಪ್ಪ ಅವರು ಎಲ್ಲರಿಗಿಂತ ಎತ್ತರದ ಲೀಡರ್ ಎಂದು ಹೇಳಿದರು. 

BJP never sidelined me, grateful to PM Modi for opportunities, says  Yediyurappa - India Today

ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗುತ್ತಿರುವ ಪ್ರಶ್ನೆಗೆ, ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಬೆಂಕಿ ಬೀಳುತ್ತದೆ. ಬೆಂಕಿ ನಂದಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಡಿಸಿಗಳ ಜೊತೆ ಸಭೆಯನ್ನು ಮಾಡಿದ್ದೇನೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ‌ ನಂದಿಸಲು ಹೆಲಿಕಾಪ್ಟರ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು. 

Bengaluru-Mysuru Expressway: Just 2 more days for the grand opening by PM  Modi, traffic diversions announced

ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಟೋಲ್ ಸಂಗ್ರಹಕ್ಕೆ ಕಾಂಗ್ರೆಸ್ ವಿರೋಧ ಕುರಿತ ಪ್ರಶ್ನೆಗೆ, ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ.‌ ಕಾಂಗ್ರೆಸ್ ಸರ್ಕಾರ ಇದ್ದಾಗ ಟೋಲ್ ಆಗಿಲ್ವಾ? ಕೆಟ್ಟ ಪರಂಪರೆ ಕಾಂಗ್ರೆಸ್ ನದ್ದು.‌ ಸಮಸ್ಯೆ ಇದ್ದರೆ ಕೂತು ಬಗೆಹರಿಸಿಕೊಳ್ಳಬಹುದು. ಕಾಂಗ್ರೆಸ್ ಸಭ್ಯತೆಯ ದಿವಾಳಿತನ ತೋರಿಸಿದೆ ಎಂದು ಟೀಕಿಸಿದರು. 

The victimhood of the Congress party

ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿರುವ ಕುರಿತು ಕೇಳಿದ್ದಕ್ಕೆ, ಕುಡಿಯುವ ನೀರಿನ ವಿಚಾರದಲ್ಲಿ ಟಾಸ್ಕ್ ಫೊರ್ಸ್ ಮಾಡಲಾಗಿದೆ. ನೀರಿಗಾಗಿ ಕೆಲವು ಕಡೆ ತುಂಬಾ ಸಮಸ್ಯೆಗಳಿವೆ.‌ ಕೆಲವು ಭಾಗದಲ್ಲಿ ಬೋರ್ ವೆಲ್ ಗಳು ಬತ್ತಿ ಹೋಗಿದೆ. ಈ ಬಗ್ಗೆ ವರದಿ ತರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. 

ಬಿಜೆಪಿಯಲ್ಲಿ ಹಿರಿಯ ಶಾಸಕರಿಗೆ ಟಿಕೆಟ್ ಇಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಟಿಕೆಟ್ ಹಂಚಿಕೆ ಬಗ್ಗೆ ಹಿರಿಯರು ನಿರ್ಧಾರ ಕೈಗೊಳ್ಳುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡೋದು ಅವರ ಪಕ್ಷಕ್ಕೆ ಬಿಟ್ಟಿದ್ದು. ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಶೀಘ್ರವಾಗಿ ಬಿಡುಗಡೆಯಾಗಲಿದೆ. ಚುನಾವಣೆಯನ್ನು ಗೆಲ್ಲುವ ನಿಟ್ಟಿನಲ್ಲಿ ಪಕ್ಷ ಗೆಲ್ಲುವ ನಿರ್ಧಾರ ಕೈಗೊಳ್ಳಲಿದೆ ಎಂದರು.‌

Cm Bommai slams congress on Guarantee card in Mangalore, it's just a visiting card no Guarantee for the people he added. There is no guarantee for their words.