ಬ್ರೇಕಿಂಗ್ ನ್ಯೂಸ್
17-03-23 09:01 pm Mangalore Correspondent ಕರಾವಳಿ
ಮಂಗಳೂರು, ಮಾ.17 : ಒಳಚರಂಡಿ ಇನ್ನಿತರ ಸ್ವಚ್ಛತಾ ಕೆಲಸ ನಿರ್ವಹಿಸುವ ಕಾರ್ಮಿಕರು ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಧರಣಿ ನಿರತ ಅಳಕೆ ಪ್ರದೇಶಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಭೇಟಿ ನೀಡಿ, ಕಾರ್ಮಿಕರ ಜತೆ ಸಂಧಾನ ಮಾತುಕತೆ ನಡೆಸಿದ್ದಾರೆ. ಶಾಸಕರ ಭರವಸೆ ಹಿನ್ನೆಲೆಯಲ್ಲಿ ಕೆಲಸ ಪುನರ್ ಆರಂಭಿಸುವುದಾಗಿ ಕಾರ್ಮಿಕರು ತಿಳಿಸಿದ್ದಾರೆ.
ಮಾ.13ರಿಂದ ಪೌರ ಕಾರ್ಮಿಕರು ಹೊರಗುತ್ತಿಗೆ ನೌಕರರ ನೇರ ನೇಮಕಾತಿ/ನೇರ ಪಾವತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ ಆರಂಭಿಸಲಾಗಿತ್ತು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ ಪೌರ ಕಾರ್ಮಿಕರು ಪ್ರತಿಭಟನೆ ನಿರತರಾಗಿದ್ದರು. ಇದರಿಂದ ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಬಿಗಡಾಯಿಸುವಂತಾಗಿತ್ತು. ಶುಕ್ರವಾರ ಮಧ್ಯಾಹ್ನದ ಒಳಗೆ ಶಾಸಕರು, ಅಧಿಕಾರಿಗಳು ಸ್ಥಳಕ್ಕೆ ಬಂದು ಭರವಸೆ ನೀಡದಿದ್ದರೆ ತ್ಯಾಜ್ಯವನ್ನು ಮೈಗೆ ಸುರಿದುಕೊಂಡು ಮಹಾನಗರ ಪಾಲಿಕೆಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿದ್ದರು.
ಹೀಗಾಗಿ ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನೆ ನಡೆಯುತ್ತಿದ್ದ ಕುದ್ರೋಳಿಗೆ ಅಳಕೆಗೆ ಬಂದಿದ್ದು ಕಾರ್ಮಿಕರ ಜೊತೆ ಮಾತುಕತೆ ನಡೆಸಿದ್ದಾರೆ. ಕಾರ್ಮಿಕರು ನ್ಯಾಯಯುತವಾಗಿಯೇ ಹೋರಾಟ ಮಾಡುತ್ತಿದ್ದಾರೆ. ಅವರ ಬೇಡಿಕೆ ಸರಿಯಾಗಿಯೇ ಇದೆ. ಆದರೆ ಇದರಿಂದ ಮಂಗಳೂರಿನ ಜನರು ತೊಂದರೆ ಅನುಭವಿಸುತ್ತಿದ್ದು ಇದರ ಬಗ್ಗೆ ಕಾರ್ಮಿಕರಿಗೆ ಮನವರಿಕೆ ಮಾಡಲಾಗಿದೆ. ಕಾರ್ಮಿಕರ ಬೇಡಿಕೆ ಪರಿಗಣಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಮಾಜಿ ಮೇಯರ್ ದಿವಾಕರ್, ಕಾರ್ಪೊರೇಟರ್‌ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಜಯಶ್ರೀ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.
ಸಭೆಯ ಬಳಿಕ ಧರಣಿ ಕುಳಿತ ಕಾರ್ಮಿಕರು ಮಾತನಾಡಿ, ಶಾಸಕ ವೇದವ್ಯಾಸ್ ಕಾಮತ್ ಅವರು ನಮ್ಮ ಸಮಸ್ಯೆಗಳನ್ನು ಆಲಿಸಿ, ಪ್ರಾಮಾಣಿಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ. ಪ್ರಮುಖವಾಗಿ ಮೂರು ಆಶ್ವಾಸನೆಗಳನ್ನು ನೀಡಿದ್ದು, ಸದ್ಯಕ್ಕೆ ಒಳಚರಂಡಿ ನಿರ್ವಹಣಾ ಕಾಮಗಾರಿಯನ್ನು ಆರಂಭಿಸಲು ನಿರ್ಧರಿಸಿದ್ದೇವೆ ಎಂದರು.
MCC's 234 underground drainage outsourced workers to take part in protest in Bengaluru. After the protesters threatened to hold a demonstration in front of the MCC by pouring sewage wastewater, MLA Vedhvyas Kamath, mayor Jayanand Anchan, and corporation commissioner Chennabasappa K arrived on the scene to negotiate with employees.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm