ಬ್ರೇಕಿಂಗ್ ನ್ಯೂಸ್
21-03-23 09:00 pm Mangalore Correspondent ಕರಾವಳಿ
ಮಂಗಳೂರು, ಮಾ.21 : ಆರ್.ಟಿ.ಐ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆ ನಡೆದು ಏಳು ವರ್ಷ ಸಂದಿದೆ. ಆದರೆ ಬಿಜೆಪಿ ಸರಕಾರದ ಒಬ್ಬನೇ ಒಬ್ಬ ಜನಪ್ರತಿನಿಧಿ ಈವರೆಗೂ ಬಾಳಿಗಾ ಮನೆಗೆ ಭೇಟಿ ನೀಡಲಿಲ್ಲ. ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಲಿಲ್ಲ. ಸರಕಾರದಿಂದ ಕನಿಷ್ಟ ಪರಿಹಾರವನ್ನೂ ಒದಗಿಸಿ ಕೊಡಲಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್ ನೆಟ್ಟಾರು ಸಾವಿಗೆ ಸ್ಪಂದಿಸಿದ ಸಂಘ ಪರಿವಾರ, ಬಿಜೆಪಿ ಸರಕಾರ ತಮ್ಮದೇ ಸಂಘಟನೆಯ ಕಾರ್ಯಕರ್ತ ವಿನಾಯಕ ಬಾಳಿಗಾ ಸಾವಿಗೆ ಯಾಕಾಗಿ ಸ್ಪಂದಿಸಿಲ್ಲ ಎಂದು ಪ್ರೊ. ನರೇಂದ್ರನಾಯಕ್ ಪ್ರಶ್ನೆ ಮಾಡಿದ್ದಾರೆ.
ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆಗೆ ಮಾರ್ಚ್ 21ಕ್ಕೆ ಏಳು ವರ್ಷ ಸಂದಿದ್ದು ವೆಂಕಟರಮಣ ದೇವಸ್ಥಾನದಿಂದ ಕಲಾಕುಂಜ ಬಳಿಯ ಬಾಳಿಗಾ ಮನೆಯ ವರೆಗೆ ನಡೆದ ಮೆರವಣಿಗೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೇರಿದ ಬಿಜೆಪಿ ನಾಯಕರು, ಹಿಂದುಗಳಿಗೆ ಏನೇ ಅನ್ಯಾಯವಾದರೂ ಸಹಿಸೋದಿಲ್ಲ ಎಂದು ರೋಷ ತೋರುತ್ತಾರೆ. ಆದರೆ ಬಾಳಿಗಾ ಸಾವಿಗೆ ನ್ಯಾಯ ಒದಗಿಸಲು ಯಾಕೆ ರೋಷ ಹುಟ್ಟಲಿಲ್ಲ? ಅದೇ ಸಮುದಾಯದ ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ ಬಾಳಿಗಾ ಮನೆಗೆ ಈವರೆಗೂ ಭೇಟಿ ನೀಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.



ಸಭೆಯನ್ನು ಉದ್ದೇಶಿಸಿ ಖ್ಯಾತ ಮನೋವೈದ್ಯರಾದ ಪಿ.ವಿ ಭಂಡಾರಿ, ನಾಗರಿಕ ಸೇವಾಟ್ರಸ್ಟ್ ನ ಸೋಮನಾಥ ನಾಯಕ್ , ಡಿಎಸ್ಎಸ್ ನ ಹಿರಿಯ ಮುಖಂಡರಾದ ಎಂ.ದೇವದಾಸ್ ಮಾತನಾಡಿದರು. ವಿನಾಯಕ ಬಾಳಿಗಾರ ಸಹೋದರಿಯರಾದ ಅನುರಾಧ ಬಾಳಿಗ, ಹರ್ಷ ಬಾಳಿಗ , ಮಾಜಿ ಉಪಮೇಯರ್ ಮಹಮ್ಮದ್ ಕುಂಜತ್ತಬೈಲ್ , ಮಾಜಿ ಕಾರ್ಪೊರೇಟರ್ ಗಳಾದ ಪ್ರಕಾಶ್ ಸಾಲ್ಯಾನ್, ಪದ್ಮನಾಭ ಅಮೀನ್, ಸಾಮರಸ್ಯ ಬಳಗದ ಮಂಜುಳಾ ನಾಯಕ್, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್, ಸುನೀಲ್ಕುಮಾರ್ ಬಜಾಲ್, ಸಂತೋಷ್ ಬಜಾಲ್, ರಘು ಎಕ್ಕಾರ್, ಸರೋಜಿನಿ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು, ಅಸುಂತ ಡಿಸೋಜ, ಪ್ರಮೀಳಾ ದೇವಾಡಿಗ, ರೇವಂತ್ ಕದ್ರಿ, ವಿನೀತ್ ದೇವಾಡಿಗ, ಸಂಜನಾ ಛಲವಾದಿ, ಜೆರಾಲ್ಡ್ ಟವರ್, ನೀರಜ್ ಪಾಲ್, ಟಿ. ಸಿ ಗಣೇಶ್, ನಿತಿನ್ ಕುತ್ತಾರ್, ವಾಸುದೇವ ಉಚ್ಚಿಲ್ ಮುಂತಾದವರು ಉಪಸ್ಥಿತರಿದ್ದರು.
Mangalore RTI activist Vinayak Baliga murder case, why govt has no interest as like praveen nettaru, slams Narendra Nayak. Vinayak Baliga was hacked to death near his house in Kodailbail in the city on March 21, 2016. Police filed chargesheet against Naresh Shenoy, Shrikant, Shivaprasad, Vinit Poojary, Nishit Devadiga, Shailesh and Manjunath Shenoy. The case against another accused Vignesh Nayak got abated following his suicide in November 2020.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 02:22 pm
HK News Staffer
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm