ಬ್ರೇಕಿಂಗ್ ನ್ಯೂಸ್
22-03-23 09:02 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಹೊರ ಗುತ್ತಿಗೆ ನೌಕರರು, ಪೌರ ಕಾರ್ಮಿಕರು ತಮ್ಮ ನೇರ ನೇಮಕಾತಿ, ನೇರ ಪಾವತಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ನಗರ ಭಾಗದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದು ಮಂಗಳೂರು ಸ್ಮಾರ್ಟ್ ಸಿಟಿ ಗಬ್ಬು ನಾರುವಂತಾಗಿದೆ. ಅಪಾರ್ಟ್ಮೆಂಟ್, ಹೊಟೇಲ್ ಮುಂದೆ ರಾಶಿ ಬಿದ್ದ ತ್ಯಾಜ್ಯ ಸಂಗ್ರಹಕ್ಕೆ ಮಹಾನಗರ ಪಾಲಿಕೆಯಿಂದ ಪರ್ಯಾಯ ವ್ಯವಸ್ಥೆ ಮಾಡಿದರೂ, ರಸ್ತೆ ಬದಿಗಳಲ್ಲಿ ಕಸದ ರಾಶಿ ದಾರಿಹೋಕರ ಮೂಗಿಗೆ ವಿಚಿತ್ರ ವಾಸನೆ ಬಡಿಯತೊಡಗಿದೆ.
ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳೂರಿನ ಪಾಲಿಕೆಯಲ್ಲಿ 60 ವಾರ್ಡ್‌ಗಳಿಗೆ ಕಸ ಸಂಗ್ರಹದ ಹೊಣೆಯನ್ನು ಆಯಾ ಭಾಗದ ಕಾರ್ಪೊರೇಟರ್ ಗಳಿಗೆ ವಹಿಸಲಾಗಿದೆ. ಹೀಗಾಗಿ ಕಾರ್ಪೊರೇಟರ್ ಉಸ್ತುವಾರಿಯಲ್ಲಿ ಕಸ ಸಂಗ್ರಹದ ವಾಹನಗಳು ಓಡಾಡಿದರೂ ಪೂರ್ತಿಯಾಗಿ ಕಸ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಕಸದ ರಾಶಿ ಬಿದ್ದಿರುವುದು, ಕೆಲವು ಕಡೆ ರಸ್ತೆ ಬದಿಗಳಲ್ಲಿ ಕಸವನ್ನು ಸುರಿಯುವ ಕೃತ್ಯ ಏರಿಕೆ ಕಂಡಿದೆ.

ದೊಡ್ಡ ಕಟ್ಟಡ, ಹೋಟೆಲ್, ಕೆಲವು ಅಪಾರ್ಟ್ಮೆಂಟ್ ಆಸುಪಾಸಿನಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿದ್ದು ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ಜೊತೆಗೆ, ಮನೆ ಮನೆಯ ಕಸ ಸಂಗ್ರಹವೂ ಆಗುತ್ತಿಲ್ಲ. ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಕಗ್ಗಂಟು ಮಾಡಿದೆ.
ರಾಜ್ಯದೆಲ್ಲೆಡೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ, ಹೊರಗುತ್ತಿಗೆ ಕಾರ್ಮಿಕರ ಜತೆ ಮಾತುಕತೆ ನಡೆಸಿಕೊಂಡು ಮಹತ್ವದ ನಿರ್ಧಾರಗಳಿಗೆ ಆದೇಶ ಕೊಡಿಸುವ ಭರವಸೆ ನೀಡಿದ್ದಾರೆ. ಕಸದ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲರನ್ನು ನೇರಪಾವತಿಗೆ ತರಲು ಮಾ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿಅಂಗೀಕಾರ ಪಡೆಯಲಾಗುವುದು ಎಂದಿದ್ದಾರೆ.
Sanitation workers protest steps into 10th day, Mangalore city filled with garbage, residents face issues.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 12:34 pm
HK News Staffer
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm