ಬ್ರೇಕಿಂಗ್ ನ್ಯೂಸ್
25-03-23 04:13 pm Mangalore Correspondent ಕರಾವಳಿ
ಸುಳ್ಯ, ಮಾ.25 : ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು. ಇಬ್ಬರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45) ಮತ್ತು ಅವರ ಪತ್ನಿ ಶಾಂತ (35) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಮೃತಪಟ್ಟಿದ್ದಾನೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಬಳಿ ಘಟನೆ ನಡೆದಿದೆ.
ಖಾಸಗಿ ವ್ಯಕ್ತಿಯೊಬ್ಬರು ಮನೆಯ ಹಿಂಭಾಗದಲ್ಲಿ ಧರೆ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದು ಪಿಲ್ಲರ್ ತೆಗೆಯಲು ಅಗೆದು ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಮೇಲ್ಭಾಗದ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ನಾಲ್ವರು ಓಡಿ ಪಾರಾಗಿದ್ದರೆ, ಮೂವರು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆದು ಒಳಗೆ ಸಿಲುಕಿದ್ದವರ ರಕ್ಷಣೆಗೆ ಯತ್ನಿಸಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸತತ ಒಂದುವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು ಒಳಗೆ ಸಿಲುಕಿದ್ದ ಮೂವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದಾರೆ.
Mangalore Retaining wall collapses in Sullia, three workers killed on spot. After one hour of work by JCB the three workers who were stuck inside the mud were removed. Minster Angara visited the spot.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm