'ಅಲೆ ಬುಡಿಯೆರ್ಗೆ..' ನರಿಂಗಾನ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ ; ಉಳ್ಳಾಲದಲ್ಲಿ ಪ್ರಥಮ ಸರಕಾರಿ ಕಂಬಳ 

25-03-23 04:31 pm       Mangalore Correspondent   ಕರಾವಳಿ

ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಹೊನಲು ಬೆಳಕಿನ ಲವ-ಕುಶ ಜೋಡುಕರೆ ಕಂಬಳಕ್ಕೆ ತಲಪಾಡಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಗಣೇಶ್ ಭಟ್ ಮತ್ತು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅವರು ವಿಧ್ಯುಕ್ತ ಚಾಲನೆ ನೀಡಿದರು.

ಉಳ್ಳಾಲ, ಮಾ.25 : ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಹೊನಲು ಬೆಳಕಿನ ಲವ-ಕುಶ ಜೋಡುಕರೆ ಕಂಬಳಕ್ಕೆ ತಲಪಾಡಿ ದುರ್ಗಾಪರಮೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಗಣೇಶ್ ಭಟ್ ಮತ್ತು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅವರು ವಿಧ್ಯುಕ್ತ ಚಾಲನೆ ನೀಡಿದರು.

ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಪ್ರಥಮ‌ ವರ್ಷದ ಹೊನಲು‌ ಬೆಳಕಿನ ನರಿಂಗಾನ‌ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ದೊರೆತಿದೆ. ಸರಕಾರಿ ಸ್ವಾಮ್ಯದ ವಿಶಾಲ ಕಂಬಳ ಕರೆಯಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಕಂಬಳ ಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಕಣಂತೂರು ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಮಾತನಾಡಿ ವೆಂಕಪ್ಪ ಕಾಜವರು ಪಜೀರಲ್ಲಿ ಆರಂಭಿಸಿದ್ದ ಲವ-ಕುಶ ಜೋಡು ಕರೆ ಕಂಬಳವು ಸರಕಾರದ ಪ್ರಾಯೋಜಕತ್ವದಲ್ಲಿ ಮತ್ತೆ ಮೋರ್ಲದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವುದು ಕಂಬಳ ಪ್ರೇಮಿಗಳಲ್ಲದೆ ನರಿಂಗಾನ ಗ್ರಾಮಕ್ಕೆ ಸಂತಸದ ವಿಚಾರ ಎಂದರು. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಯು.ಟಿ ಖಾದರ್ ಮಾತನಾಡಿ ಕಂಬಳ ಮತ್ತು ಯಕ್ಷಗಾನ ಕರಾವಳಿಯ ಎರಡು ಕಣ್ಣುಗಳಿದ್ದಂತೆ. ಇದನ್ನ ಮುಂದಿನ‌ ಪೀಳಿಗೆಗೂ ಉಳಿಸಿ ಪರಿಚಯಿಸುವ ಜವಾಬ್ದಾರಿ ನಮ್ಮದು ಎಂದರು.

ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿಗಳಾದ ವೇದಮೂರ್ತಿ ವರ್ಕಾಡಿ ರಾಜೇಶ್ ತಾಳಿತ್ತಾಯ, ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ, ಕೋಶಾಧಿಕಾರಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಜೊತೆ ಕಾರ್ಯದರ್ಶಿಗಳಾದ ಪ್ರೇಮಾನಂದ ರೈ ನೆತ್ತಿಲಕೋಡಿ ಮೊದಲಾದವರು ಉಪಸ್ಥಿತರಿದ್ದರು.

Lava Kusha jodukere kambala inaugurated with grandeur under MLA UT Khader in Mangalore.