ಬ್ರೇಕಿಂಗ್ ನ್ಯೂಸ್
28-03-23 04:09 pm Mangalore Correspondent ಕರಾವಳಿ
ಪುತ್ತೂರು, ಮಾ.28: ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ವಿರುದ್ಧ ಪಕ್ಷದ ಕಾರ್ಯಕರ್ತರೇ ರಾಂಗ್ ಆಗಿದ್ದಾರೆ. ಮಾ.29ರಂದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಆಗಮಿಸಲಿದ್ದು, ಮಲ್ಲಿಕಟ್ಟೆಯಲ್ಲಿ ಶಕ್ತಿಪ್ರದರ್ಶನ ಮಾಡಲಿದ್ದಾರೆ.
ಭಾನುವಾರ ಸುಳ್ಯ ಮತ್ತು ಕಡಬದಲ್ಲಿ ಪ್ರತ್ಯೇಕವಾಗಿ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆ ನಡೆಸಿದ್ದರು. ಸುಳ್ಯದಲ್ಲಿ ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರೆ, ಕಡಬದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡು ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂದು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಆದರೆ ಬೆಂಗಳೂರಿಗೆ ತೆರಳಿ ರಾಜ್ಯ ನಾಯಕರಿಗೆ ತಮ್ಮ ಆಕ್ಷೇಪ ತಿಳಿಸುವುದಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಕಡೆಯಿಂದ ರಾಜ್ಯ ಸಮಿತಿಗೆ ಆಕ್ಷೇಪ ಹೋಗಬೇಕು. ಅದಕ್ಕಾಗಿ ಮಂಗಳೂರಿನಲ್ಲಿ ಸುಳ್ಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ಸೇರಲಿದ್ದಾರೆ. ಮಾ.29ರಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬರಲಿದ್ದು ಶಾಸಕ ಅಭ್ಯರ್ಥಿಯನ್ನು ಬದಲಿಸಬೇಕು, ನಂದಕುಮಾರ್ ಅವರನ್ನೇ ಅಭ್ಯರ್ಥಿ ಮಾಡಬೇಕೆಂದು ಒತ್ತಡ ಹೇರಲಿದ್ದಾರೆ.
ಇದಕ್ಕಾಗಿ 15ಕ್ಕೂ ಹೆಚ್ಚು ಬಸ್, ಹತ್ತಕ್ಕೂ ಹೆಚ್ಚು ವ್ಯಾನ್ ಗಳನ್ನು ಮಾಡಿಕೊಂಡಿದ್ದಾರೆ. ಆಮೂಲಕ ಈ ಬಾರಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಲೇಬೇಕೆಂದು ಕಾರ್ಯಕರ್ತರು ಹಠ ತೊಟ್ಟಿದ್ದಾರೆ. ಈ ಬಗ್ಗೆ ಕಾರ್ಯಕರ್ತರೊಬ್ಬರ ಬಳಿ ಕೇಳಿದಾಗ, ನಾವು ಕಾರ್ಯಕರ್ತರೇ ಹಣ ಸಂಗ್ರಹಿಸಿಕೊಂಡು ಮಂಗಳೂರಿಗೆ ಬರುತ್ತಿದ್ದೇವೆ. ಬಸ್ ಗಳಿಗೆ ನಾವೇ ನೂರು, ನೂರೈವತ್ತು ಅಂತ ದೇಣಿಗೆ ಸಂಗ್ರಹಿಸಿ ಹಣ ಕೊಡುತ್ತಿದ್ದೇವೆ. ಇದರಲ್ಲಿ ನಂದಕುಮಾರ್ ಅವರ ಪಾತ್ರ ಏನೂ ಇಲ್ಲ. ಕಾರ್ಯಕರ್ತರ ಜೊತೆಗೆ ಒಡನಾಟ ಹೊಂದಿರುವ ನಂದಕುಮಾರ್ ಬಗ್ಗೆ ಕ್ಷೇತ್ರದಲ್ಲಿ ಒಲವು ಇದೆ. ಹಾಗಾಗಿ ಅವರಿಗೇ ಸೀಟು ಕೊಡಬೇಕೆಂಬುದು ನಮ್ಮ ನಿಲುವು. ಅದಕ್ಕಾಗಿ ರಾಜ್ಯ ನಾಯಕರಿಗೆ ಒತ್ತಡ ಹೇರುತ್ತೇವೆ ಎಂದು ತಿಳಿಸಿದ್ದಾರೆ.
30 ವರ್ಷಗಳಿಂದ ಕಾಂಗ್ರೆಸ್ ಶಾಸಕರಿಲ್ಲದೆ ನಾವು ಸೊರಗಿದ್ದೇವೆ. ಕಷ್ಟ ಎದುರಿಸಿದ್ದೇವೆ. ಹೀಗಾಗಿ ಸುಳ್ಯದಲ್ಲಿ ಪಕ್ಷದ ಶಾಸಕರನ್ನು ಗೆಲ್ಲಿಸಬೇಕೆಂದು ನಂದಕುಮಾರ್ ಮುಂದಿಟ್ಟು ಕ್ಷೇತ್ರದಾದ್ಯಂತ ಸಂಚಾರ ಮಾಡಿದ್ದೇವೆ. ಕೊನೆಯ ವೇಳೆಗೆ ಟಿಕೆಟ್ ಕೊಡದಿದ್ದರೆ ಹೇಗೆ ಎಂದವರು ಪ್ರಶ್ನೆ ಮಾಡಿದ್ದಾರೆ. ಕಡಬ ಮತ್ತು ಸುಳ್ಯ ಬ್ಲಾಕ್ ಮಟ್ಟದಲ್ಲಿ ಹೆಚ್ಚಿನ ನಾಯಕರು, ಕಾರ್ಯಕರ್ತರೆಲ್ಲ ನಂದ ಕುಮಾರ್ ಪರ ಇದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮತ್ತು ಕೆಲವರು ಮಾತ್ರ ಕೃಷ್ಣಪ್ಪ ಪರ ಇದ್ದಾರೆ ಎಂದು ಇನ್ನೊಬ್ಬ ಕಾರ್ಯಕರ್ತ ಮಾಹಿತಿ ನೀಡಿದ್ದಾರೆ.
Sullia dissidence from a section of their supporters and party workers in the Sullia constituency over seat to G Krishnappa.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm