ತಲಪಾಡಿ ಗಡಿಯಲ್ಲಿ ನೋಟಿನ ಕಂತೆ ಜಪ್ತಿ ; ಕೇರಳದಿಂದ ಮಂಗಳೂರಿಗೆ ತರುತ್ತಿದ್ದ ದಾಖಲೆ ರಹಿತ 7.95 ಲಕ್ಷ ರು. ವಶಕ್ಕೆ 

01-04-23 08:39 pm       Mangalore Correspondent   ಕರಾವಳಿ

ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. 

ಉಳ್ಳಾಲ, ಎ.1 : ಕೇರಳದ ಕಡೆಯಿಂದ ಯಾವುದೇ ದಾಖಲೆಗಳಿಲ್ಲದೆ ನಗದು ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು 7,95,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. 

ಕಾಸರಗೋಡು ಜಿಲ್ಲೆಯ ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರು ಕಾರಿನಲ್ಲಿ ಬರುತ್ತಿದ್ದಾಗ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೊಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಕಾರಿನಲ್ಲಿ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳ ವಶಕ್ಕೆ ನಗದು ಹಾಗೂ ಕಾರನ್ನು ನೀಡಲಾಗಿದೆ. 

ಸುರೇಶ್ ಅವರು ಕಾಸರಗೋಡಿನಲ್ಲಿ ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Mangalore Seven lakhs worth cash seized at Talapady by Ullal police.