ಬ್ರೇಕಿಂಗ್ ನ್ಯೂಸ್
02-04-23 11:02 pm Mangalore Correspondent ಕರಾವಳಿ
ಬಂಟ್ವಾಳ, ಎ.2 : ಎಲ್ಲಾ ಧರ್ಮ, ಜಾತಿಗಳನ್ನು ಒಗ್ಗಟ್ಟಾಗಿ ಕೊಂಡೊಯ್ದು ಜನ ಸೇವೆ ಮಾಡುವ ಕಾಂಗ್ರೆಸ್ ನ ಜನಪ್ರಿಯ ನಾಯಕ ಬಿ. ರಮಾನಾಥ ರೈ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ, ಸಚಿವರೂ ಆಗಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಆಶಯ ವ್ಯಕ್ತಪಡಿಸಿದ್ದಾರೆ.
ಬಿ.ಸಿ.ರೋಡ್ ನ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಮಾತೃಶಕ್ತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಾವಿತ್ರಿಬಾಯಿ ಫೂಲೆ ಅವರು ಮಹಿಳೆಯರಿಗೆ ಮೊತ್ತಮೊದಲ ಬಾರಿಗೆ ಶಿಕ್ಷಣ ನೀಡಿದ ಪರಿಣಾಮ ದೇಶದಲ್ಲಿ ಮಹಿಳೆಯರು ಸಾಕಷ್ಟು ಸಶಕ್ತರಾಗಿದ್ದಾರೆ. ತೊಟ್ಟಿಲು ತೂಗುವ ಕೈಗಳು ದೇಶವನ್ನು ಸಮರ್ಥವಾಗಿ ಮುನ್ನಡೆಸಬಲ್ಲವು ಎಂಬುದನ್ನು ಇಂದಿರಾ ಗಾಂಧಿ ತೋರಿಸಿಕೊಟ್ಟಿದ್ದಾರೆ. ಎರಡು ದಶಕಗಳ ಕಾಲ ಕಾಂಗ್ರೆಸ್ ಅನ್ನು ಸೋನಿಯಾ ಗಾಂಧಿ ಮುನ್ನಡೆಸಿದ್ದಾರೆ ಎಂದು ಸ್ಮರಿಸಿದರು.
ಬಿಜೆಪಿ ಸಾಕಷ್ಟು ಸುಳ್ಳು ಭರವಸೆ ನೀಡಿ, ಊಹಾಪೋಹಗಳನ್ನು ಹರಡಿ, ಅಪಪ್ರಚಾರಗಳನ್ನು ಮಾಡಿ ಅಧಿಕಾರಕ್ಕೆ ಬಂದಿದೆ. ತಾನು ನೀಡಿದ ಯಾವುದೇ ಭರವಸೆಗಳನ್ನು ಅದು ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷ. ಈಗಲೂ ಗ್ಯಾರಂಟಿ ಕಾರ್ಡ್‍ಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಘೋಷಿಸಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇವೆಲ್ಲಾ ಕಾರ್ಯಕ್ರಮಗಳು ಖಚಿತವಾಗಿ ಜಾರಿಗೊಳ್ಳುತ್ತವೆ ಎಂದು ಅವರು ಭರವಸೆ ನೀಡಿದರು. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿಯೊಂದು ಮನೆ ಯಜಮಾನಿಗೆ ಮಾಸಿಕ 2,000 ರೂ., ಗೃಹಜ್ಯೋತಿ ಕಾರ್ಯಕ್ರಮದಡಿ 200 ಯೂನಿಟ್ ವಿದ್ಯುತ್ ಉಚಿತ ಮತ್ತು ವಿದ್ಯಾವಂತ ಪದವೀಧ ನಿರುದ್ಯೋಗಿಗಳಿಗೆ 3,000 ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡುವ ಬಗ್ಗೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮನೆಯ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ಬಗ್ಗೆಯೂ ಭರವಸೆ ನೀಡಿದೆ ಎಂದವರು ಹೇಳಿದರು.
ತಾವು ಅಧಿಕಾರದಲ್ಲಿದ್ದಾಗ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ್ದ ರಮಾನಾಥ ರೈಗಳು ಏಷ್ಯಾದಲ್ಲೇ ಎರಡನೇ ಅತಿ ಹೆಚ್ಚು ಅಂಗನವಾಡಿಗಳನ್ನು ತೆರೆದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 20,000ಕ್ಕೂ ಹೆಚ್ಚು ಹಕ್ಕುಪತ್ರಗಳನ್ನು ವಿತರಿಸಿ ರಾಜ್ಯದಲ್ಲೇ ಅತ್ಯಧಿಕ ಹಕ್ಕುಪತ್ರಗಳನ್ನು ನೀಡಿದ ಜನನಾಯಕ ಎಂದು ಗುರುತಿಸಿಕೊಂಡಿದ್ದಾರೆ. ಹೀಗಾಗಿ ಮಹಿಳೆಯರು ಮತ್ತೊಮ್ಮೆ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಎಲ್ಲಾ ಧರ್ಮಗಳಲ್ಲಿ ಸ್ತ್ರೀಯರಿಗೆ ಪ್ರಾಧಾನ್ಯತೆ ನೀಡಲಾಗಿದೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಒಗ್ಗಟ್ಟಾಗಿ ಈ ಬಾರಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಕೇರಳ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಶಿಬಾ ರಾಮಚಂದ್ರನ್ ಮನವಿ ಮಾಡಿದರು. ಮಹಿಳೆಯರು ಆಡಳಿತದ ವಿವಿಧ ಹಂತಗಳಲ್ಲಿ ಅಧಿಕಾರದಲ್ಲಿದ್ದಾರೆ. ವಿಧಾನಸಭೆ, ಲೋಕಸಭೆಯಲ್ಲೂ ಮಹಿಳೆಯರಿಗೆ ಮೀಸಲಾತಿ ಜಾರಿಗೊಳ್ಳಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ರಮಾನಾಥ ರೈ ಹೇಳಿದರು. ವೃದ್ಧಾಪ್ಯ ವೇತನ ಸಹಿತ ವಿವಿಧ ಪಿಂಚಣಿ ಯೋಜನೆಗಳು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾಗೊಳ್ಳುವಂತೆ ಮನಮೋಹನ್ ಸಿಂಗ್ ಅವಧಿಯಲ್ಲೇ ಆಗಿತ್ತು. ಆದರೆ ಈ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಹರಡಲಾಗುತ್ತಿದೆ ಎಂದವರು ಹೇಳಿದರು.
ಕಳೆದ ಚುನಾವಣೆಯಲ್ಲಿ ನಾನು ಊಹಿಸಲು ಅಸಾಧ್ಯವಾದ ಅಪಪ್ರಚಾರಗಳನ್ನು ನಡೆಸಿ ನನ್ನನ್ನು ಸೋಲಿಸಲಾಗಿದೆ. 6 ಸಲ ಶಾಸಕನಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ನಾನು ಪ್ರಾಮಾಣಿಕ ಕೆಲಸ ಮಾಡಿದ್ದು ಹೌದಾದರೆ, ಈ ಬಾರಿ ಚುನಾವಣೆಯಲ್ಲಿ ನೀವು ಗೆಲ್ಲಿಸಿಕೊಡಬೇಕು ಎಂದು ಅವರು ಮನವಿ ಮಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ. ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಅಪ್ಪಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ಮೊರಾಸ್ ವೇದಿಕೆಯಲ್ಲಿದ್ದರು. ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ರಾಜ್ಯ ಮಹಿಳಾ ಕಾಂಗ್ರೆಸ್ ಸದಸ್ಯೆ ಐಡಾ ಸುರೇಶ್, ಕೆ.ಪಿ.ಸಿ.ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಕೆ.ಪಿ.ಸಿ.ಸಿ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯ ಎಂ.ಎಸ್. ಮುಹಮ್ಮದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಗಾಣಿಗ, ಜಿ.ಪಂ. ಮಾಜಿ ಸದಸ್ಯ ಪದ್ಮಶೇಖರ ಜೈನ್, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ವಾಸು ಪೂಜಾರಿ, ಶಬ್ಬೀರ್ ಸಿದ್ಧಕಟ್ಟೆ, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆಯರಾದ ಮಲ್ಲಿಕಾ ವಿ. ಶೆಟ್ಟಿ, ಧನಲಕ್ಷ್ಮಿ ಬಂಗೇರ, ತಾ.ಪಂ. ಮಾಜಿ ಸದಸ್ಯೆಯರಾದ ನಝೀಮಾ ಬೇಗಂ, ಶೋಭಾ ರೈ, ಪುರಸಭೆ ಉಪಾಧ್ಯಕ್ಷೆ ಜೆಸಿಂತಾ, ಪುರಸಭೆ ಸದಸ್ಯರಾದ ಜನಾರ್ಧನ್ ಚೆಂಡ್ತಿಮಾರ್, ಲೋಲಾಕ್ಷಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Mangalore Congress leader Ramanath Rai must win this coming Karnataka assembly election, Pushpa Amarnath. Last elections Rai had lost because of fake rumours against him she added.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm