ವಿದೇಶದಲ್ಲಿ ಕೆಲಸ ಕೊಡಿಸುವ ಆಮಿಷ ; ಮಹಿಳೆಯಿಂದ 12 ಮಂದಿಗೆ ಲಕ್ಷಾಂತರ ರೂ.  ಉಂಡೆನಾಮ! ಉಳ್ಳಾಲ ಠಾಣೆಗೆ ದೂರು 

12-04-23 10:47 pm       Mangalore Correspondent   ಕರಾವಳಿ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಗೂಗಲ್ ಪೇ ಮುಖೇನ 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಉಳ್ಳಾಲ, ಎ.12 : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು ಗೂಗಲ್ ಪೇ ಮುಖೇನ 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡಿಸ್, ಸಚಿನ್ ಪ್ರಸನ್ನ, ವಿನಯ್ ಜೋಯ್ ಆಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿಸೋಜ, ನಾಗೇಂದ್ರ ಗಣಪತಿ, ಅವಿಶ್ ಡಿಸೋಜ, ಜೋಯ್ ಸನ್ ಲೂವಿಸ್ ಎಂಬವರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚಿಸಲಾಗಿದೆ. 

ಲೀನಾ ಅವರು ಫೆ.2ರಿಂದ ಮಾ.12ರ ವರೆಗೆ ಹಂತ ಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ. 2,82,000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರು ದೂರು ನೀಡಿದ್ದಾರೆ.

Mangalore 12 cheated of job offer in abroad, cheating case registered against Leena Lobo in Ullal police station.