ಬ್ರೇಕಿಂಗ್ ನ್ಯೂಸ್
13-04-23 07:30 pm Mangalore Correspondent ಕರಾವಳಿ
ಮಂಗಳೂರು, ಎ.13 : ಪುತ್ತೂರಿನ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡಿದ್ದ ಕಾರ್ಯಕರ್ತರು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹಾಗು ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಅವರು ಶಾಸಕ ಮಠಂದೂರು ಅವರನ್ನು ಸಮಾಧಾನ ಪಡಿಸಲು ಪುತ್ತೂರಿನ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಜಿಲ್ಲಾಧ್ಯಕ್ಷರನ್ನು ತಡೆದು ನಿಲ್ಲಿಸಿದ ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂಜೀವ ಮಠಂದೂರು ಅವರನ್ನ ಕಡೆಗಣಿಸಲು ಕಾರಣವೇನು..? ಟಿಕೆಟ್ ವಿಚಾರದಲ್ಲಿ ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ..? ಹಾಗಾದರೆ ನೀವು ಅ ಹುದ್ದೆಯಲ್ಲಿರುವುದು ಯಾಕೆ..?ಸಂಜೀವ ಮಠಂದೂರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ. ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಿಕೊಳ್ಳಿ ಎಂದು ಅಸಹನೆ ವ್ಯಕ್ತಪಡಿಸಿದರು.
ಮನೆಯ ಒಳಕ್ಕೆ ಹೋಗಲು ಬಿಡದೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರನ್ನು ಸಮಾಧಾನ ಪಡಿಸಲು ಯತ್ನಿಸಿದ ಜಿಲ್ಲಾಧ್ಯಕ್ಷ ಸುದರ್ಶನ್, ತನಗೂ ಮೂರು ಬಾರಿ ಟಿಕೆಟ್ ಪಡೆಯಲು ಯತ್ನ ಮಾಡಿದರೂ ಅವಕಾಶ ಸಿಗಲಿಲ್ಲ. ಹಾಗಂತ, ನಾನು ಪಕ್ಷದ ಬಗ್ಗೆ ಅಸಹನೆ ತೋರುವುದು, ದೂರ ನಿಂತರಾಗುವುದೇ ಎಂದು ಮರು ಪ್ರಶ್ನೆ ಹಾಕಿದರು. ಈಗ ಸಂಜೀವ ಮಠಂದೂರು ಅವರಿಗೆ ಟಿಕೆಟ್ ನೀಡದೇ ಇರುವುದರ ಕಾರಣವೇನು ಎಂಬ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಕಾರ್ಯಕರ್ತರು ಆಗ್ರಹಿಸಿದರು. ಒಂದು ಹಂತದಲ್ಲಿ ನೀವು ವಿಡಿಯೋ ಮಾಡಬೇಡಿ ಎಂದು ಸುದರ್ಶನ್ ಕೇಳಿಕೊಂಡರೂ, ಕಾರ್ಯಕರ್ತರು ಕೇಳಲಿಲ್ಲ. ವಿಡಿಯೋ ನಮಗೆ ಬೇಕೆಂದು ಹೇಳಿ ವಿಡಿಯೋ ಮಾಡಿದ್ದಾರೆ. ಇದೀಗ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Puttur Denial of ticket sanjeeva Matandoor supporters take BJP district president Sudarshan Moodbidri to task. Supporters of disgruntled MLA Sanjeeva Matandoor expressed their discontentment with BJP district president Sudarshan Moodbidri for denying a BJP ticket to Matandoor in the upcoming legislative assembly elections in the state.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am