ಪುತ್ತೂರಿನಲ್ಲಿ ಅರುಣ್ ಪುತ್ತಿಲ ಭರ್ಜರಿ ರೋಡ್ ಶೋ ; ಬಿಜೆಪಿ ನಾಯಕರ ವಿರುದ್ಧ ತೊಡೆ ತಟ್ಟಿದ ಕಾರ್ಯಕರ್ತರು

17-04-23 02:06 pm       Mangaluru Correspondent   ಕರಾವಳಿ

ಪುತ್ತೂರು ವಿಧಾನಸಭೆ ಕೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಹಿಂದು ಸಂಘಟನೆ ಮುಖಂಡ ಅರುಣ್ ಪುತ್ತಿಲ ಪುತ್ತೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ 15 ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರ ಜೊತೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಪುತ್ತೂರು, ಎ.17: ಪುತ್ತೂರು ವಿಧಾನಸಭೆ ಕೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಹಿಂದು ಸಂಘಟನೆ ಮುಖಂಡ ಅರುಣ್ ಪುತ್ತಿಲ ಪುತ್ತೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ 15 ಸಾವಿರಕ್ಕೂ ಹೆಚ್ಚು ಯುವ ಕಾರ್ಯಕರ್ತರ ಜೊತೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಪುತ್ತೂರಿನ ದರ್ಬೆಯಿಂದ ಐದು ಕಿಮೀ ಉದ್ದದ ಮಿನಿ ವಿಧಾನಸೌಧದ ವರೆಗೆ ಪಾದಯಾತ್ರೆ ಜೊತೆಗೆ ಮೆರವಣಿಗೆಯಲ್ಲಿ ತೆರಳಿದ ಅರುಣ್ ಪುತ್ತಿಲ ಅವರನ್ನು ದಾರಿಯುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆಗರೆದು ಸ್ವಾಗತಿಸಿದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಎದ್ದಿದ್ದು ಬಿಜೆಪಿ ವಿರುದ್ಧವೇ ತೊಡೆ ತಟ್ಟಿದ್ದಾರೆ.

Mangalore Thousnads gather in support of Arun Kumar Puthila in Puttur over nomination. Mr. Puthila said he decided to contest as independent in order to fight for the cause of Hindutva. “I have decided to contest as independent there was demand by Sangh Parivar leaders and activists that they need their representative in the Assembly.