ಬ್ರೇಕಿಂಗ್ ನ್ಯೂಸ್
20-04-23 09:04 pm Mangalore Correspondent ಕರಾವಳಿ
ಮಂಗಳೂರು, ಏ.20 : ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ಪೂಂಜ ಎರಡು ಸೆಟ್, ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಅಶ್ರಫ್ ಆಲಿ ಕುಂಞ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ. ಸುಬ್ರಹ್ಮಣ್ಯ ಭಟ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಅಮರಶ್ರೀ ಅಮರನಾಥ ಶೆಟ್ಟಿ ಎರಡು ಸೆಟ್ ಹಾಗೂ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಉಮಾನಾಥ್ ಕೋಟ್ಯಾನ್ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಂ. ನವಾಜ್, ಪಕ್ಷೇತರ ಅಭ್ಯರ್ಥಿಯಾಗಿ ಉಸ್ಮಾನ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ 2 ಸೆಟ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಮೊಯಿದ್ದಿನ್ ಭಾವ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಸುಮತಿ ಎಸ್ ಹೆಗಡೆ 2 ಸೆಟ್, ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾನ್ ರಿಚರ್ಡ್ ಲೋಬೋ ನಾಲ್ಕು ಸೆಟ್, ಪಕ್ಷೇತರ ಅಭ್ಯರ್ಥಿಯಾಗಿ ಕೆ.ಸುಬ್ರಾಯ ಪೈ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶನನ್ ಲಾರೆನ್ಸ್ ಪಿಂಟೊ ಸಲ್ಲಿಸಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಮಹಮ್ಮದ್ ಅಶ್ರಫ್, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಚಂದ್ರಹಾಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್ ಮೂರು ಸೆಟ್, ಜನ ಹಿತ ಪಕ್ಷದ ಅಭ್ಯರ್ಥಿಯಾಗಿ ಬಾಲಕೃಷ್ಣ ಪೂಜಾರಿ ಬೋಳಿಯಾರ್, ಎಸ್ ಡಿ ಪಿ ಐ ಅಭ್ಯರ್ಥಿಯಾಗಿ ಮಹಮ್ಮದ್ ಅತಾವುಲ್ಲಾ ಎ ಹಾಗೂ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಅಲ್ತಾಫ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ ರೈ, ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪ್ರಕಾಶ್ ರಫಾಯಲ್ ಗೊಮ್ಸ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ್, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅನಿಶ್ ಶೆಟ್ಟಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ. ಕುಮಾರ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ದಿವ್ಯಪ್ರಭಾ, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ 2 ಸೆಟ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಭಾಗೀರಥಿ, ಪಕ್ಷೇತರ ಅಭ್ಯರ್ಥಿಯಾಗಿ ಗುರುವಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಸುಂದರ್ ಮೇರಾ, ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಬಿ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಗಣೇಶ ಎಂ. ಉಮೇದುವಾರಿಕೆ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಆರಂಭವಾದ ದಿನದಿಂದ ಇದುವರೆಗೆ ಒಟ್ಟು 82 ಅಭ್ಯರ್ಥಿಗಳು 109 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಏಪ್ರಿಲ್ 20 ಉಮೇದುವಾರಿಕೆ ಸಲ್ಲಿಸಲು ಅಂತಿಮ ದಿನವಾಗಿತ್ತು. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಮೇ 10 ಚುನಾವಣೆ ನಡೆಯಲಿದ್ದು 13ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
45 nominations filed by 35 candidates in Dakshina Kannada.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm