ಬ್ರೇಕಿಂಗ್ ನ್ಯೂಸ್
22-04-23 01:30 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.22: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪತ್ನಿ, ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಎರಡು ಪ್ರತ್ಯೇಕ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಡಿಕೆಶಿ ಪತ್ನಿ ಮತ್ತು ಕುಟುಂಬಸ್ಥರನ್ನು ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಮತ್ತು ಮಿಥುನ್ ರೈ, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ವಾಗತಿಸಿದ್ದಾರೆ.
ಇದೇ ವೇಳೆ, ಡಿಕೆಶಿ ಪತ್ನಿ ಮತ್ತು ಕುಟುಂಬಸ್ಥರು ಆಗಮಿಸಿದ್ದ ಹೆಲಿಕಾಪ್ಟರ್ ಚೆಕ್ ಮಾಡಲು ಬಂದ ಚುನಾವಣಾಧಿಕಾರಿಗಳ ಜೊತೆಗೆ ಹೆಲಿಕಾಪ್ಟರ್ ಪೈಲಟ್ ವಾಗ್ವಾದ ಮಾಡಿದ್ದಾರೆ. ಇದು ಖಾಸಗಿ ಹೆಲಿಕಾಪ್ಟರ್, ನಮ್ಮಲ್ಲಿ ಚೆಕ್ ಮಾಡಲು ಅವಕಾಶ ಇಲ್ಲ ಎಂದು ಹೆಲಿಕಾಪ್ಟರ್ ಪೈಲಟ್ ತಿಳಿಸಿದ್ದಾರೆ. ಈ ವೇಳೆ, ಹೆಲಿಕಾಪ್ಟರ್ ಪೈಲಟ್ ರಾಮದಾಸ್ ಮತ್ತು ಚುನಾವಣಾಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿದ್ದು ಕೊನೆಗೆ ಅಧಿಕಾರಿಗಳು ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಡಿಕೆಶಿ ಪತ್ನಿ ಉಷಾ, ಮಗ, ಮಗಳು, ಅಳಿಯ ಧರ್ಮಸ್ಥಳಕ್ಕೆ ಆಗಮಿಸಿದ್ದರು.
ಬಳಿಕ ಡಿಕೆಶಿ ಅವರು, ಪತ್ನಿ, ಮಗಳು, ಅಳಿಯನ ಜೊತೆಗೆ ಮಂಜುನಾಥ ಸ್ವಾಮಿ ದರ್ಶನ ಮಾಡಿದರು. ಆನಂತರ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಬಳಿಕ ಹೆಗ್ಗಡೆಯವರ ಜೊತೆ ಡಿಕೆಶಿ ಖಾಸಗಿ ಮಾತುಕತೆ ನಡೆಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮಂಜುನಾಥ ಸ್ವಾಮಿಯಲ್ಲಿ ರಾಜ್ಯದ ಸುಭಿಕ್ಷೆಗಾಗಿ ಪ್ರಾರ್ಥಿಸಿದ್ದೇನೆ. ಮಂಜುನಾಥ ನನಗೆ ಎಲ್ಲ ರೀತಿಯಿಂದಲು ಒಳ್ಳೆದು ಮಾಡಿದ್ದಾನೆ. ಮಾತು ಬಿಡದ ಮಂಜುನಾಥ ಎನ್ನುವ ಹೆಸರಿದೆ, ಆತ ಯಾವತ್ತೂ ನಮ್ಮ ಕೈಬಿಡಲ್ಲ. ದೇವರಲ್ಲಿ ರಾಜ್ಯದ ಜನರಿಗೆ ಒಳ್ಳೆದು ಮಾಡಲು ಪ್ರಾರ್ಥಿಸಿದ್ದೇನೆ ಎಂದರು.
Flying squad of #ECI and officials conducted a check of the #helicopter used by State #Congress president #DKShivakumar after it reached the helipad at #Dharmasthala in Dakshina Kannada. The party's state chief was travelling in the chopper. #BreakingNews pic.twitter.com/lKizduypGt
— Headline Karnataka (@hknewsonline) April 22, 2023
D K Shivakumar visits Dharmasthala, chopper checked by ECI, pilot turns angry. Flying squad of the ECI conducted a check of the helicopter used by Karnataka Pradesh Congress Committee (KPCC) President D K Shivakumar after it reached the helipad at Dharmasthala in Dakshina Kannada.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm