ಹೆಣ್ಣು ಮಗುವಾಗಲು ಹರಕೆ ; ಕಟೀಲಿನಲ್ಲಿ ಹರಕೆ ಅರ್ಪಿಸಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ 

22-04-23 10:23 pm       Mangalore Correspondent   ಕರಾವಳಿ

ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ.

ಮಂಗಳೂರು, ಎ.22: ಮಂಗಳೂರು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಹರಕೆ ಅರ್ಪಿಸಿದ್ದಾರೆ. 

ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ, ಇಬ್ಬರು ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ಶಿಲ್ಪಾ ಶೆಟ್ಟಿಯವರ ತಾಯಿ ಜೊತೆಗಿದ್ದರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ, ಇಷ್ಟಾರ್ಥ ನೆರವೇರಿದ್ದಕ್ಕಾಗಿ ದಂಪತಿ ದೇವಿಗೆ ಸೀರೆ ಹರಕೆ ಒಪ್ಪಿಸಿದರು. 

ಕಟೀಲು ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿ ಹರಸಿದರು. ಅರ್ಚಕರಾದ ಅನಂತ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ಇದೇ ವೇಳೆ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯ ವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.

Mangalore Bollywood actress Shilpa Shetty visits Kateel Temple with her family and offered prayers. She offered special pooja on behalf of her family.