ಬ್ರೇಕಿಂಗ್ ನ್ಯೂಸ್
24-04-23 04:27 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು (ಉಳ್ಳಾಲ) ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ಯುಟಿ ಖಾದರ್ ಬೆಂಬಲಿಗರು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.
ನಾನು ಎಲ್ಲೂ ಓಡಿಹೋಗಿಲ್ಲ, ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದೇನೆ. ಘಟನೆ ಬಗ್ಗೆ ಪೊಲೀಸ್ ದೂರು ನೀಡುತ್ತೇನೆ ಎಂದರು. ಸುದ್ದಿಗೋಷ್ಟಿಯಲ್ಲಿ ಅಲ್ತಾಫ್ ಕುಂಪಲ ಜೊತೆಗೆ ಮಾತನಾಡಿದ ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ನಮ್ಮ ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮಗಳನ್ನು ಆಡಳಿತಕ್ಕೆ ಬಂದ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ. ಜನರ ಮಧ್ಯೆ ಗೊಂದಲ, ವೈಷಮ್ಯ ಮೂಡಿಸುವ ರಾಜಕೀಯ ನಾವು ಎಂದಿಗೂ ಮಾಡಿಲ್ಲ ಎಂದರು.
ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಿಶ್ಚಿತ. ಜಿಲ್ಲೆಯಲ್ಲಿ 8 ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಮೊಯಿದೀನ್ ಬಾವಾ ಅವರನ್ನು ಕಣಕ್ಕಿಳಿಸಿದ್ದು ಗೆಲ್ಲುವ ವಿಶ್ವಾಸ ನಮ್ಮಲ್ಲಿದೆ. ಜಿಲ್ಲೆಯ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಹಾಕಿದ್ದು ಎಲ್ಲ ಕಡೆಯೂ ನಾಮಪತ್ರ ಸಿಂಧು ಆಗಿತ್ತು. ಮಂಗಳೂರು ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಬೇಕಾದ ಅಲ್ತಾಫ್ ಕುಂಪಲ ಎಂಬ ಒಬ್ಬ ವ್ಯಕ್ತಿಯನ್ನು, ಅವರ ಸಮಾಜಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದ್ದೇವೆ.

ಆದರೆ ಎರಡು ದಿನಗಳ ಹಿಂದೆ ಅವರು ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆ. ಬೆದರಿಕೆ, ಧಮ್ಕಿ ಹಾಕಿ ನಾಮಪತ್ರ ವಾಪಸ್ ಪಡೆಯಲು ಒತ್ತಡ ಹಾಕಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಸಮಾಜದ ಜನರನ್ನು ಹೇಗೆ ನಡೆಸಿಕೊಳ್ಳಬಹುದು. ಇಂಥಹ ಘಟನೆ ಇಡೀ ಜಿಲ್ಲೆಗೆ ಕಪ್ಪು ಚುಕ್ಕೆ. ನಾವು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಆಶ್ರಫ್ ಖಾಜಿ, ಯುವ ಜನತಾದಳದ ಅಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
Mangalore Ullal JDS candidate Altaf Kumpala says he was kidnapped and forced to withrdraw nomination by MLA Khader followers. Altaf Kumpala was active in SSF for many years. Recently, he joined the JD(S) and got B form to contest from Ullal after convincing MLA B M Farooq. Altaf Kumpala, a leader of SSF, who had filed nomination on JD(S) ticket from Ullal legislative constituency, withdrew the nomination on April 21 without informing party leaders.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm