ಬ್ರೇಕಿಂಗ್ ನ್ಯೂಸ್
26-04-23 10:28 pm Mangalore Correspondent ಕರಾವಳಿ
ಉಳ್ಳಾಲ, ಎ.26 : ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರನ್ನ ಜೀವ ಬೆದರಿಕೆಯೊಡ್ಡಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆಂಬ ಪ್ರಕರಣ ಸಂಬಂಧಿಸಿ ಕೈ ಪಕ್ಷದ ಮಾಜಿ ಕೌನ್ಸಿಲರುಗಳಿಬ್ಬರು ಸೇರಿದಂತೆ ಕಾರ್ಯಕರ್ತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ಪುರಸಭೆಯ ಕಾಂಗ್ರೆಸಿನ ಮಾಜಿ ಕೌನ್ಸಿಲರುಗಳಾದ ಮುಸ್ತಾಫ ಯಾನೆ ಖಬುರು ಮುಸ್ತಾಫ, ಉಸ್ಮಾನ್ ಕಲ್ಲಾಪು , ರಿಯಾಝ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಎ.21ರಂದು ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಧಿಕೃತ ಅಭ್ಯರ್ಥಿಯಾಗಿ ಎ ಮತ್ತು ಬಿ ಫಾರಂ ಪಡೆದು ಉಳ್ಳಾಲ ನಗರಸಭೆ ಚುನಾವಣಾ ಕಚೇರಿಯಲ್ಲಿ ಅಲ್ತಾಫ್ ಕುಂಪಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆಯಲ್ಲಿ ಸಿಂಧುತ್ವಗೊಂಡ ಘೋಷಣೆ ನಂತರ ಅದೇ ದಿನ ಸಂಜೆ 3 ಗಂಟೆಗೆ ಮೇಲಂಗಡಿ ದರ್ಗಾ ಹಿಂಭಾಗದಲ್ಲಿ ಮುಸ್ತಾಫ, ಉಸ್ಮಾನ್, ರಿಯಾಝ್ ಹಾಗೂ ಇತರರು ಸೇರಿ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಅವರನ್ನು ಬೆದರಿಕೆ ಹಾಕಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದು ಉಮೇದ್ವಾರಿಕೆ ವಾಪಸ್ಸು ಪಡೆಯುವ ಪತ್ರಕ್ಕೆ ಸಹಿಯನ್ನು ಬಲವಂತವಾಗಿ ಪಡೆದುಕೊಂಡಿದ್ದಾರೆ.
ಅಲ್ತಾಫ್ ರನ್ನು ಅಲ್ಲಿಂದ ಎಳೆದು ತಂದು ಚುನಾವಣಾಧಿಕಾರಿಗಳಿಗೆ ಉಮೇದ್ವಾರಿಕೆ ವಾಪಸ್ಸು ತೆಗೆದುಕೊಳ್ಳುವ ಪತ್ರವನ್ನು ಸಲ್ಲಿಸುವಂತೆ ಮಾಡಿದ್ದಾರೆ. ಘಟನೆ ನಂತರ ಮತ್ತೆ ತಡರಾತ್ರಿ ಮನೆಗೆ ನುಗ್ಗಿ ಬೆದರಿಕೆಯೊಡ್ಡಿದ್ದಾರೆಂದು ದೂರಲಾಗಿದ್ದು ಉಮೇದ್ವಾರಿಕೆ ಹಿಂಪಡೆಯುವ ಸಂದರ್ಭ ಅಭ್ಯರ್ಥಿ ಅಲ್ತಾಫ್ ಪರ ಅನುಮೋದಕರಿಗೆ ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Threat to Jds candiate Althaf Kumpala over nomination, files complaint to Ullal police station against Congress leaders. Altaf Kumpala, a candidate from the Janata Dal Secular (JDS) party for the Mangalore Assembly Constituency, has claimed that he was abducted by a team from the National Congress party.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm