ಪುತ್ತೂರು; ಹರಿವೆ ಸೊಪ್ಪಿನ‌ ಪದಾರ್ಥ ಸೇವಿಸಿ ಮೂವರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

29-04-23 01:45 pm       Mangalore Correspondent   ಕರಾವಳಿ

ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ.

ಪುತ್ತೂರು, ಎ.29: ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ.

ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು.

ಕೈಲಾಜೆ ಕೊರಗಪ್ಪ ಗೌಡ ಮನೆಯಲ್ಲಿ ಮಧ್ಯಾಹ್ನದ ಊಟಕ್ಕೆ ತಮ್ಮ ಮನೆಯಲ್ಲಿಯೇ ಬೆಳೆದ ಹರಿವೆಯ ಪದಾರ್ಥ ಮಾಡಿದ್ದರು. ಎಂದಿನಂತೆ ಮಧ್ಯಾಹ್ನ ಊಟ ಸೇವಿಸಿದ್ದವರು. ಸಂಜೆಯಾಗುತ್ತಲೇ ಪದಾರ್ಥ ಸೇವಿಸಿದ್ದ ಮೂವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ತೀವ್ರವಾಗಿ ಆಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಬಳಿಕ ಮೂವರನ್ನು ಕೂಡ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Puttur family of three admitted at Hospital in Mangalore after eating dishes made by Amaranth Leaves.