ಚಿನ್ನದ ಪೌಡರ್ ಅಡಗಿಸಿಟ್ಟು ತರುತ್ತಿದ್ದ ಪ್ರಯಾಣಿಕ ವಶಕ್ಕೆ

28-10-20 10:26 am       Mangalore Reporter   ಕರಾವಳಿ

ಅಕ್ರಮವಾಗಿ ಚಿನ್ನವನ್ನು ತರುತ್ತಿದ್ದ ಪ್ರಯಾಣಿಕನನ್ನು ಲಕ್ಷಾಂತರ ರೂ. ಮೌಲ್ಯದ ಚಿನ್ನದ ಜೊತೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು, ಅಕ್ಟೋಬರ್ 28: ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಚಿನ್ನವನ್ನು ಅಕ್ರಮವಾಗಿ ತರುತ್ತಿದ್ದ ಪ್ರಯಾಣಿಕನನ್ನು ಲಕ್ಷಾಂತರ ರೂ. ಮೌಲ್ಯದ ಚಿನ್ನದ ಜೊತೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಅಬೂಬಕರ್ ಸಿದ್ದೀಕ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ದುಬೈನಿಂದ ಸ್ಪೈಸ್‌ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದಿದ್ದಾನೆ. ತಪಾಸಣೆ ನಡೆಸುವ ವೇಳೆ 24 ಕ್ಯಾರೆಟ್‌ನ  634 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯು ಪೌಡರ್ ರೂಪದ ಚಿನ್ನವನ್ನು ದೇಹಕ್ಕೆ ಅಡಗಿಸಿಟ್ಟು ಅಕ್ರಮವಾಗಿ ತರುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Video: 

The Mangalore Customs officers have arrested a passenger and seized 634 grams of gold worth of 32.96 lakhs at Mangalore International Airport.