ಬ್ರೇಕಿಂಗ್ ನ್ಯೂಸ್
06-05-23 02:57 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಮಂಗಳೂರು ಮಹಾನಗರಕ್ಕೆ ನೀರೊದಗಿಸುವ ನೇತ್ರಾವತಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. 2019ರಲ್ಲಿ ಇದೇ ರೀತಿಯ ಸ್ಥಿತಿ ಎದುರಾಗಿತ್ತು. ಮೂರು ವರ್ಷಗಳ ಬಳಿಕ ಮಂಗಳೂರಿನಲ್ಲಿ ಮತ್ತೆ ಅದೇ ರೀತಿಯ ಸ್ಥಿತಿ ಉಂಟಾಗಿದೆ.
2019ರಲ್ಲಿ ಎಪ್ರಿಲ್ 11ರಿಂದ ಮೊದಲನೇ ಹಂತದ ನೀರಿನ ರೇಷನಿಂಗ್ ಆರಂಭಗೊಂಡಿತ್ತು. ಆದರೆ, ಆಗ ತುಂಬೆ ಡ್ಯಾಮ್ ನಲ್ಲಿ 5.5 ಮೀ.ನಷ್ಟು ನೀರಿನ ಮಟ್ಟ ಇತ್ತು. ನಂತರದ ವರ್ಷಗಳಲ್ಲಿ ಬೇಸಗೆಯಲ್ಲಿ ಮಳೆ ಸುರಿದ ಪರಿಣಾಮ ನಗರದಲ್ಲಿ ನೀರಿನ ಸಮಸ್ಯೆ ಬಂದಿರಲಿಲ್ಲ. ಆದರೆ, ಈ ಬಾರಿ ಬೇಸಗೆಯಲ್ಲಿ ಮಳೆಯೇ ಸುರಿದಿಲ್ಲ. ಇದರಿಂದಾಗಿ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಪ್ರಮಾಣ ತೀವ್ರ ಕುಸಿದಿದೆ. ಮೇ 5ರಂದು ನೀರಿನ ಪ್ರಮಾಣ 4.10 ಮೀ.ಗೆ ಇಳಿಕೆ ಕಂಡಿದೆ. ತುಂಬೆ ಕೆಳ ಭಾಗದಲ್ಲಿ ಹೊಸತಾಗಿ ಅಡ್ಯಾರ್ ನಲ್ಲಿ ಮಾಡಿರುವ ಅಣೆಕಟ್ಟಿನಿಂದ ನೀರೆತ್ತುವ ಕೆಲಸ ಆಗುತ್ತಿದೆ. ಆದರೂ ಎರಡು ವಾರಗಳಿಗೆ ಬೇಕಾಗುವಷ್ಟು ಮಾತ್ರ ನೀರಿದೆ.

2016ರಲ್ಲಿಯೂ ಮಂಗಳೂರಿನಲ್ಲಿ ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಉಂಟಾಗಿತ್ತು. ತುಂಬೆ ಡ್ಯಾಂನಲ್ಲಿ ನೀರಿಲ್ಲದೆ, ನಗರದಲ್ಲಿ ಟ್ಯಾಂಕರ್ ನೀರು ಪೂರೈಸಲಾಗಿತ್ತು. ಕೊನೆಗೆ ಕುದುರೆಮುಖದ ಲಕ್ಯಾ ಡ್ಯಾಂ ನೀರನ್ನು ತರಿಸಲಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ 2017ರಲ್ಲಿ ಪ್ರತಿ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್ ಆರಂಭಿಸಿತ್ತು. ಇದೀಗ ದಿನ ಬಿಟ್ಟು ದಿನಕ್ಕೆ ನೀರು ಪೂರೈಸುತ್ತಿದ್ದು ಇದರಿಂದ ಎತ್ತರದ ಪ್ರದೇಶಗಳಿಗೆ ನೀರು ತಲುಪುವುದಿಲ್ಲ. ಪೈಪ್ ನಲ್ಲಿ ಗಾಳಿ ತುಂಬುವುದರಿಂದ ಕೆಲವು ಪ್ರದೇಶಕ್ಕೆ ನೀರು ಸರಬರಾಜು ಆಗುತ್ತಲ್ಲ ಎಂಬ ದೂರು ಕೇಳಿಬಂದಿದೆ.
ಈ ನಡುವೆ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಕಾಲೇಜು ತರಗತಿಗಳಿಗೂ ತಟ್ಟಿದೆ. ಎರಡೂ ಜಿಲ್ಲೆಗಳಲ್ಲಿ ಬಹುತೇಕ ಕಾಲೇಜುಗಳಿಗೆ ನೀರು ಸರಬರಾಜು ಸಮಸ್ಯೆ ಕಾಡುತ್ತಿದೆ. ಹಾಸ್ಟೆಲ್ ಹೊಂದಿರುವ ಕಾಲೇಜುಗಳಲ್ಲಿ ನೀರಿನ ಕೊರತೆ ಬಹುತೇಕ ಎದುರಾಗಿದೆ.
ಇದೇ ವೇಳೆ, ಕುಡಿಯುವ ನೀರಿನ ಸಮಸ್ಯೆಯಿರುವ ಕಾಲೇಜುಗಳಲ್ಲಿ ಆನ್‌ಲೈನ್ ತರಗತಿ ನಡೆಸಲು ಅವಕಾಶ ನೀಡಲಾಗಿದೆ. ಸಂಜೆ 4ರ ವರೆಗೆ ನಡೆಯುತ್ತಿದ್ದ ಕೆಲವು ಕಾಲೇಜುಗಳ ಸಮಯವನ್ನು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ನಡೆಸಲಾಗುತ್ತಿದೆ.
ಮಂಗಳೂರಿನಲ್ಲಿ ಕೆಲವು ದಿನದ ಹಿಂದೆ 3 ದಿನ ನೀರಿನ ಪೂರೈಕೆ ಸ್ಥಗಿತವಾಗಿದ್ದ ಕಾರಣದಿಂದ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಆನ್‌ಲೈನ್ ತರಗತಿ ನಡೆಸಲಾಗಿತ್ತು. ಬಳಿಕ ಟ್ಯಾಂಕರ್ ನೀರು ತರಿಸಿ ತರಗತಿ ನಡೆಸಲಾಗಿತ್ತು. ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ಸ್ಥಳೀಯಾಡಳಿತದ ನೀರಿನ ವ್ಯವಸ್ಥೆ ಸರಿಯಾಗಿ ಲಭ್ಯವಿಲ್ಲದ ಕಾರಣದಿಂದ ಟ್ಯಾಂಕರ್ ನೀರನ್ನೇ ಆಶ್ರಯಿಸುವಂತಾಗಿದೆ.
Water scarcity third time after 2016 and 2019 in Mangalore, water for two weeks for city left in dam, colleges in city face trouble.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 01:51 pm
Mangalore Correspondent
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm