ಬ್ರೇಕಿಂಗ್ ನ್ಯೂಸ್
08-05-23 10:18 pm Mangalore Correspondent ಕರಾವಳಿ
ಮಂಗಳೂರು, ಮೇ 8 : ರಾಜ್ಯದಲ್ಲಿ ಸಂಪೂರ್ಣ ಗೋಹತ್ಯಾ ನಿಷೇಧವನ್ನು ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತಂದಿದ್ದರೂ, ಗೋಕಟುಕರು ಅದನ್ನು ಉಲ್ಲಂಘಿಸಿ ಗೋಹತ್ಯೆ ನಿರಂತರವಾಗಿ ಮಾಡುತ್ತಾ ಬಂದಿದ್ದರು. ಉತ್ತರ ಕ್ಷೇತ್ರದಲ್ಲಿ ಮೂರು ಕಡೆ ಅವ್ಯಾಹತವಾಗಿ ಗೋಹತ್ಯೆ ನಡೆಯುತ್ತಿರುವುದು ಗಮನಕ್ಕೆ ಬಂದ ತಕ್ಷಣ ಶಾಸಕ ಡಾ. ಭರತ್ ಶೆಟ್ಟಿ ಅದನ್ನು ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆಯಡಿ ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಸೂಚಿಸಿದ್ದರು. ಅಲ್ಲದೆ, ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಂಡಿದ್ದರು. ಈ ಧೈರ್ಯವನ್ನು ರಾಜ್ಯದಲ್ಲಿ ತೋರಿಸಿದ ಮೊದಲ ಶಾಸಕ ಡಾ.ಭರತ್ ಶೆಟ್ಟಿ ಎಂದು ಮಂಗಳೂರು ನಗರ ಉತ್ತರ ಬಿಜೆಪಿ ಮಂಡಲದ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ ಹೇಳಿದ್ದಾರೆ.
ಅವರು ಕ್ಷೇತ್ರವ್ಯಾಪಿ ಪ್ರಚಾರದಲ್ಲಿ ನಿರತರಾಗಿದ್ದಾಗ ಭೇಟಿಯಾದ ವರದಿಗಾರರೊಂದಿಗೆ ಮಾತನಾಡುತ್ತಾ ಈ ಅನಿಸಿಕೆ ವ್ಯಕ್ತಪಡಿಸಿದ್ದರು. ಗೋಹಂತಕರಿಗೆ ಬಿಸಿ ಮುಟ್ಟಿಸುವ ಅಗತ್ಯ ಇತ್ತು. ಅವರು ಕಾಯ್ದೆ, ಕಾನೂನು, ನಿಯಮಗಳನ್ನು ಕ್ಯಾರೇ ಮಾಡುತ್ತಿರಲಿಲ್ಲ. ಅಂತವರನ್ನು ಕಾನೂನಿನ ಪರಿಧಿಯೊಳಗೆ ತರಲು ಧೈರ್ಯ, ಸಾಹಸ ಬೇಕು. ಅದನ್ನು ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ತೋರಿಸಿದ್ದಾರೆ. ಇದರ ನಂತರ ಜಿಲ್ಲೆಯಲ್ಲಿ ಅಕ್ರಮ ಕಸಾಯಿಗಳ ವಿರುದ್ಧ ಧ್ವನಿ ಪ್ರಬಲವಾಯಿತು ಎಂದು ಅವರು ತಿಳಿಸಿದರು.
ಒಬ್ಬ ಶಾಸಕ ಸರಕಾರದ ನಿಯಮಗಳನ್ನು ಅನುಸರಿಸಿ ಏನೆಲ್ಲಾ ಮಾಡಲು ಸಾಧ್ಯವಿದೆ ಎಂದು ತೋರಿಸಿಕೊಟ್ಟವರು ಡಾ. ಭರತ್ ಶೆಟ್ಟಿ. ಅವರು ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಿದ ನಂತರ ಅವರಿಗೆ ಮತಾಂಧರ ಬೆದರಿಕೆ ಕರೆಗಳು, ಒತ್ತಡ ಎಲ್ಲವೂ ಬಂದಿದೆ. ಆದರೂ ಎದೆಗುಂದದೆ ಅವರು ತಮ್ಮ ನಿಲುವಿನಲ್ಲಿ ಅಚಲರಾಗಿ ನಿಂತು ಮುನ್ನುಗ್ಗಿದ್ದಾರೆ. ಈ ಮೂಲಕ ರಾಜ್ಯ ಸರಕಾರ ಜಾರಿಗೆ ತಂದ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತಂದು ಗೋಪ್ರೇಮಿಗಳಲ್ಲಿ ಭರವಸೆ ಮೂಡಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ತಲವಾರು ತೋರಿಸಿ ಮನೆಗಳ ಕೊಟ್ಟಿಗೆಯಿಂದ ಗೋವುಗಳನ್ನು ಎಳೆದುಕೊಂಡ ಹೋದ ಒಂದೇ ಒಂದು ಉದಾಹರಣೆ ಇಲ್ಲ. ಅದಕ್ಕೆ ಮುಖ್ಯ ಕಾರಣ ಭರತ್ ಶೆಟ್ಟಿಯವರ ದಕ್ಷ ಆಡಳಿತ.
ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಯಾವುದೇ ಹಸ್ತಕ್ಷೇಪ ಮಾಡದೇ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಂತೆ ಮಾಡಿದ್ದಾರೆ. ಇನ್ನು ಹಿಂದುತ್ವದೊಂದಿಗೆ ಅಭಿವೃದ್ಧಿಯನ್ನು ಕೂಡ ಶಾಸಕ ಡಾ. ಭರತ್ ಶೆಟ್ಟಿ ವೈಯವರು ಜೊತೆ ಜೊತೆಯಾಗಿ ತೆಗೆದುಕೊಂಡಿದ್ದಾರೆ. ಅದಕ್ಕೆ ಕ್ಷೇತ್ರದಲ್ಲಿ ಆಗಿರುವ 2,250 ಕೋಟಿ ರೂ ಅಭಿವೃದ್ಧಿ ಯೋಜನೆಗಳೇ ಸಾಕ್ಷಿ. ಇಂತಹ ಶಾಸಕರನ್ನು ಜನ ಮತ್ತೊಮ್ಮೆ ಆರಿಸಲು ಬಯಸುತ್ತಿದ್ದಾರೆ ಎಂದು ತಿಲಕರಾಜ್ ಕೃಷ್ಣಾಪುರ ಹೇಳಿದ್ದಾರೆ.
Mangalore MLA Bharath Shetty plays major role in passing anti cow slaughter law in Karnataka says North BJP President Tilikraj Krishnapura.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm