ಬ್ರೇಕಿಂಗ್ ನ್ಯೂಸ್
11-05-23 01:00 pm Mangalore Correspondent ಕರಾವಳಿ
ಮಂಗಳೂರು, ಮೇ 11: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಗಲಾಟೆ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮತ್ತೆ ನಾಲ್ಕು ಠಾಣೆಗಳ ವ್ಯಾಪ್ತಿಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ.
ಕಾವೂರು ಜೊತೆಗೆ, ಬಜ್ಪೆ, ಕಂಕನಾಡಿ ಗ್ರಾಮಾಂತರ, ಮೂಡುಬಿದ್ರೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸೆಕ್ಷನ್ ಹೇರಲಾಗಿದೆ. ನಿನ್ನೆ ರಾತ್ರಿ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಎರಡು ತಂಡಗಳ ಮಧ್ಯೆ ಹೊಯ್ ಕೈ, ಗಲಾಟೆ ನಡೆದಿತ್ತು. ಮತ ಎಣಿಕೆ ಸಂದರ್ಭದಲ್ಲಿ ಅಹಿತಕರ ಘಟನೆ ಆಗಬಾರದು ಎನ್ನುವ ನೆಲೆಯಲ್ಲಿ ಆಸುಪಾಸಿನ ಠಾಣೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ ಹೇರಿದ್ದಾರೆ.

ಮೇ 14ರ ಬೆಳಗ್ಗೆ 6 ಗಂಟೆ ವರೆಗೆ ಐದು ಠಾಣೆ ವ್ಯಾಪ್ತಿಗೆ ಸೆಕ್ಷನ್ ಜಾರಿಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಆದೇಶ ಮಾಡಿದ್ದಾರೆ. ನಿನ್ನೆ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಶೆಡ್ಡೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಗಲಾಟೆ ನಡೆದಿತ್ತು. ಕಲ್ಲೆಸೆತದಿಂದ ಮೂವರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಒಬ್ಬ ಪೊಲೀಸ್ ಸಿಬಂದಿಗೆ ಗಾಯವಾಗಿತ್ತು. ಎರಡೂ ಕಡೆಯಿಂದ ಸಾಕಷ್ಟು ಜನ ಸೇರಿದ್ದರಿಂದ ಉದ್ರಿಕ್ತ ವಾತಾವರಣ ಉಂಟಾಗಿತ್ತು.
ಮೋದಿ ಮೋದಿ ಕೂಗಿಗೆ ಕಾಂಗ್ರೆಸ್ ಜೈಕಾರ ; ಮಿಥುನ್ ರೈ ಕಾರಿಗೆ ಕಲ್ಲು, ಮೂಡುಶೆಡ್ಡೆ ಉದ್ವಿಗ್ನ
144 section Imposed in 5 police station limits after After Stones Pelted at Congress Candidate Mithun Rai Car at Moodushedde in Mangalore said Police Commissioner Kuldeep Kumar Jain. As soon as the assembly polls ended, BJP workers assaulted the Congress party workers when both party workers shouted slogans at Moodushedde, here on May 10.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm