ಬ್ರೇಕಿಂಗ್ ನ್ಯೂಸ್
28-10-20 08:41 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 28: ಬಿಜೆಪಿ ಕಾರ್ಯಕರ್ತ, ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ನಡೆದಿದೆ.
ಪರಂಗಿಪೇಟೆ ಜಂಕ್ಷನ್ನಲ್ಲಿ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂರು ಮಂದಿ ಆಗಂತುಕರು ಸ್ಟುಡಿಯೋಗೆ ನುಗ್ಗಿ ದಿನೇಶ್ ಕೊಟ್ಟಿಂಜ ಮೇಲೆ ದಾಳಿ ನಡೆಸಿದ್ದಾರೆ. ತಲವಾರು ದಾಳಿಯಿಂದ ಗಾಯಗೊಂಡ ದಿನೇಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ 7.30ರ ಸುಮಾರಿಗೆ ತನ್ನ ಸ್ಟುಡಿಯೋದಲ್ಲಿದ್ದ ವೇಳೆ ಮೂವರು ಫೋಟೊ ತೆಗೆಯಲೆಂದು ಆಗಮಿಸಿದ್ದರು. ಅದರಲ್ಲಿ ಒಬ್ಬ ಫೋಟೊ ತೆಗೆಯಲೆಂದು ಒಳಕ್ಕೆ ಬಂದಿದ್ದ. ಈ ವೇಳೆ, ದಿನೇಶ್ ಕ್ಯಾಮರಾ ರೆಡಿ ಮಾಡುತ್ತಿದ್ದಾಗ ಮತ್ತಿಬ್ಬರು ಒಳಗೆ ನುಗ್ಗಿ ದಾಳಿ ನಡೆಸಿದ್ದಾರೆ. ದಿನೇಶ್ ಕೂಡಲೇ ಬೊಬ್ಬೆ ಹೊಡೆದಿದ್ದು ಅಕ್ಕಪಕ್ಕದ ಅಂಗಡಿಗಳ ಜನ ಆಗಮಿಸಿ ದುಷ್ಕರ್ಮಿಗಳ ಮೇಲೆ ಚೇರ್ ನಿಂದ ಹೊಡೆಯಲು ಆರಂಭಿಸಿದ್ದಾರೆ. ದುಷ್ಕರ್ಮಿಗಳು ಓಡಿ ಹೋಗಿದ್ದು ದಿನೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಿನೇಶ್, ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನೇಶ್ ಶೆಟ್ಟಿ ಕೊಟ್ಟಿಂಜ, ಬಿಜೆಪಿ ಮಂಗಳೂರು ಕ್ಷೇತ್ರ ಸಮಿತಿಯಲ್ಲಿ ಪದಾಧಿಕಾರಿಯಾಗಿದ್ದಾರೆ. ಹೊಸ ದಿಗಂತ ಪತ್ರಿಕೆಗೆ ಅರೆಕಾಲಿಕ ವರದಿಗಾರನಾಗಿಯೂ ಕೆಲಸ ಮಾಡುತ್ತಿದ್ದಾರೆ. ದುಷ್ಕರ್ಮಿಗಳು ಪೂರ್ವ ದ್ವೇಷದಿಂದ ಹಲ್ಲೆ ನಡೆಸಿದ್ದಾರೆಯೇ, ಬೇರೇನಾದ್ರೂ ಕಾರಣ ಇದೆಯೇ ಎನ್ನುವ ಬಗ್ಗೆ ಗೊತ್ತಾಗಿಲ್ಲ.
In a shocking event, photographer Dinesh Shetty of Trisha Studio in Farangipete was reported to have been stabbed inside his studios by miscreants. The incident happened on Wednesday, October 28.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm