ಬ್ರೇಕಿಂಗ್ ನ್ಯೂಸ್
15-05-23 11:03 am Mangalore Correspondent ಕರಾವಳಿ
ಪುತ್ತೂರು, ಮೇ 15 : ಪುತ್ತೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಾಗಿರುವ ಹಿನ್ನೆಲೆಯಲ್ಲಿ ಆಕ್ರೋಶಕ್ಕೀಡಾದ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹಾಗೂ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದಾರೆ.
ಪುತ್ತೂರಿನ ಬಸ್ ನಿಲ್ದಾಣದ ಬಳಿ ರಸ್ತೆ ಬದಿಯಲ್ಲಿ ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತರೇ ಈ ಕೃತ್ಯ ನಡೆಸಿದ್ದು ಪುತ್ತೂರಿನವರೇ ಆದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡರಿಗೆ ಹಿಡಿಶಾಪ ಹಾಕಿದ್ದಾರೆ. ಇಬ್ಬರ ಭಾವಚಿತ್ರದ ಬ್ಯಾನರ್ ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಕೋರಿದ್ದು 'ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ' ಅಂತ ಬರೆದಿದ್ದಾರೆ. ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಿದ್ದು ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವುದು ಕಾರ್ಯಕರ್ತರು ಮತ್ತು ಸಂಘಟನೆಗೆ ತೀವ್ರ ಹಿನ್ನಡೆಯಾಗಿದೆ. ಇದಕ್ಕೆಲ್ಲ ರಾಜ್ಯಾಧ್ಯಕ್ಷ ನಳಿನ್ ಮತ್ತು ಡಿವಿ ಸದಾನಂದ ಗೌಡ ಕಾರಣ ಎನ್ನುವ ನೆಲೆಯಲ್ಲಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಿಂದು ಕಾರ್ಯಕರ್ತರ ಕಡೆಗಣನೆ ಮಾಡಿದ್ದಕ್ಕಾಗಿ ಹಿಂದು ಮುಖಂಡ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸಿ ರಾಜ್ಯದ ಗಮನ ಸೆಳೆದಿದ್ದರು. ಕಾಂಗ್ರೆಸ್ ವಿರುದ್ದ ಕೇವಲ ಮೂರು ಸಾವಿರ ಮತಗಳ ಅಂತರದಲ್ಲಿ ಸೆಣಸಾಡಿ ಪುತ್ತಿಲ ಸೋತಿದ್ದರು. ಬಿಜೆಪಿ ಅಭ್ಯರ್ಥಿ ಕಾಂಗ್ರೆಸಿಗೆ ಹೋರಾಟ ನೀಡಲು ಸಾಧ್ಯವಾಗದೆ, 35 ಸಾವಿರ ಮತಗಳೊಂದಿಗೆ ದೂರ ಉಳಿದಿದ್ದರು. ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯ ಸೋಲಿಗೆ ನಳಿನ್ ಕುಮಾರ್ ಮತ್ತು ಡಿವಿಯೇ ಕಾರಣ ಎಂದು ಇಬ್ಬರ ವಿರುದ್ಧವೂ ಕಿಡಿ ಕಾರುತ್ತಿದ್ದಾರೆ.
ನಳಿನ್ ಕುಮಾರ್ ಹಾಗೂ ಡಿವಿಎಸ್ ಪುತ್ತೂರು ತಾಲೂಕಿನವರೇ ಆಗಿದ್ದು ಪಕ್ಷದ ಪ್ರತಿ ನಡೆಗಳ ಮೇಲೆ ಕೈಯಾಡಿಸುತ್ತಿದ್ದರು. ಈ ಬಾರಿ ಚುನಾವಣೆ ಘೋಷಣೆ ಮೊದಲೇ ಉತ್ತಮ ಅಭ್ಯರ್ಥಿಗೆ ಸೀಟು ಕೊಡಬೇಕು, ಹಿಂದು ಸಂಘಟನೆ ಹಿನ್ನೆಲೆ ಇದ್ದವರಿಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು ಆಗ್ರಹ ಮಾಡಿದ್ದರು. ಕೊನೆಗೆ, ಸುಳ್ಯದ ಮಹಿಳೆಗೆ ಟಿಕೆಟ್ ಕೊಟ್ಟಿದ್ದು ಕಾರ್ಯಕರ್ತರನ್ನು ಕೆರಳಿಸಿತ್ತು. ಇದನ್ನೆಲ್ಲ ನಳಿನ್ ಕುಮಾರ್ ಮಾಡಿಸಿದ್ದು ಎಂದು ಕಾರ್ಯಕರ್ತರಲ್ಲಿ ಆಕ್ರೋಶ ಇದೆ.
Garland of footwear banner put on BJP Nalin Kateel and D V Sadananda Gowda in Puttur goes viral after lossing Karnataka elections. It is said BJP karyakartas have put up the banner. Reason for BJP to loose Karnataka elections by two great people is posted in the banner.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm