ಬ್ರೇಕಿಂಗ್ ನ್ಯೂಸ್
29-10-20 08:48 am Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 29: ಬಿಜೆಪಿ ಮುಖಂಡ ಹಾಗು ಫೋಟೋಗ್ರಾಫರ್ ದಿನೇಶ್ ಶೆಟ್ಟಿ ಕೊಟ್ಟಿಂಜ ಎಂಬವರ ಮೇಲಿನ ದಾಳಿ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ 3 ಗಂಟೆ ಅವಧಿಯಲ್ಲಿ ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.
ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್(22), ಮತ್ತು ಮಹಮ್ಮದ್ ಸೈಪುದ್ದೀನ್(22) ಬಂಧಿತರಾಗಿದ್ದು ಪೊಲೀಸರ ವಿಚಾರಣೆಯಲ್ಲಿ ತಮ್ಮ ಕೃತ್ಯದ ಉದ್ದೇಶವನ್ನು ಬಾಯ್ಬಿಟ್ಟಿದ್ದಾರೆ. ಬಂಟ್ವಾಳ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ಆರೋಪಿ ಸವಾದ್ ಬಂಧನಕ್ಕೆ ಬಲೆ ಬೀಸಿದೆ.
ಬುಧವಾರ (ನಿನ್ನೆ) ಸಂಜೆ ಸುಮಾರು 7:15ರ ಹೊತ್ತಿಗೆ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಲ್ಲಿ ದಿನೇಶ್ ತಮ್ಮ ಪೋಟೊ ಸ್ಟುಡಿಯೋದಲ್ಲಿದ್ದಾಗ ನಾಲ್ವರು ಯುವಕರು ಫೋಟೊ ತೆಗೆಸುವ ನೆಪದಲ್ಲಿ ಬಂದಿದ್ದರು. ಈ ಸಂದರ್ಭ ದಿನೇಶ್ ಅವರ ಮೇಲೆ ತಲವಾರಿನಿಂದ ದಾಳಿ ನಡೆಸಲಾಗಿತ್ತು. ಈ ವೇಳೆ ಅಲ್ಲಿದ್ದ ಶೇಖರ ಪೂಜಾರಿ ಎಂಬವರು ಹಲ್ಲೆ ತಪ್ಪಿಸಲು ಆರೋಪಿಗಳಿಗೆ ಜೋರಾಗಿ ಅಲ್ಲೇ ಇದ್ದ ಚೇರ್ ನಿಂದ ಹೊಡೆದಿದ್ದು ಅವರ ಕೈಗೆ ಗಾಯವಾಗಿತ್ತು. ಬಳಿಕ ಅಕ್ಕಪಕ್ಕದ ವ್ಯಾಪಾರಸ್ಥರು ಸೇರಿದಾಗ ಆರೋಪಿಗಳು ಪರಾರಿಯಾಗಿದ್ದರು.
ಕೊಲ್ಲಲು ಬಂದಿದ್ದ ದುಷ್ಕರ್ಮಿಗಳು !
ಇತ್ತೀಚೆಗೆ ಪರಂಗಿಪೇಟೆ ಬಳಿಯ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಪ್ರಕರಣದಲ್ಲಿ ದಿನೇಶ್, ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದೇ ಈ ದಾಳಿಗೆ ಕಾರಣ ಎಂಬುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ನಮ್ಮ ವಿಷಯಕ್ಕೆ ನೀನ್ಯಾಕೆ ಬಂದಿದ್ದೀಯಾ.. ಅಂತ ಪ್ರಶ್ನಿಸಿ ಫೋಟೊ ತೆಗೆಸುವ ನೆಪದಲ್ಲಿ ಬಂದಿದ್ದ ಯುವಕರು ತಲವಾರು ದಾಳಿ ನಡೆಸಿದ್ದಾರೆ.
ಘಟನೆಯ ದ್ವೇಷದಿಂದ ದಿನೇಶ್ ಅವರನ್ನು ಕೊಲ್ಲುವ ಉದ್ದೇಶದಿಂದ ತಲವಾರು ದಾಳಿ ನಡೆಸಲಾಗಿತ್ತು. ತಲವಾರು ದಾಳಿಯಿಂದಾಗಿ ದಿನೇಶ್ ಅವರ ತಲೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ತೀವ್ರ ಗಾಯವಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಿನೇಶ್ ಬಿಜೆಪಿ ಪರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನಾಗಿದ್ದು ಪುದು ಮಹಾಶಕ್ತಿ ಕೇಂದ್ರದ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿದ್ದಾರೆ.
An attempt to kill photographer Dinesh, owner of Trisha Studio at Farangipet, was made by a gang of four youngsters. Three of them have been held by the police.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm