ಬ್ರೇಕಿಂಗ್ ನ್ಯೂಸ್
16-05-23 06:43 pm Mangalore Correspondent ಕರಾವಳಿ
ಪುತ್ತೂರು, ಮೇ 16: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ, ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಏಳು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಏಳು ಮಂದಿಯ ಪೈಕಿ ನಾಲ್ವರು ಕಟ್ಟರ್ ಬಿಜೆಪಿ ಕಾರ್ಯಕರ್ತರೇ ಆಗಿದ್ದು ಮೊನ್ನೆ ಬಿಜೆಪಿ ಪರವಾಗಿಯೇ ಚುನಾವಣೆಗೆ ದುಡಿದಿದ್ದರು. ಮೂವರು ಕಾರ್ಯಕರ್ತರು ಅರುಣ್ ಪುತ್ತಿಲ ಪರವಾಗಿ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ಚುನಾವಣೆ ಫಲಿತಾಂಶದಲ್ಲಿ ಅರುಣ್ ಪುತ್ತಿಲ ಗೆಲುವಿನ ಹತ್ತಿರ ಹೋಗಿದ್ದ ಬಳಿಕ ಪುತ್ತೂರಿನ ಬಿಜೆಪಿ ಕಾರ್ಯಕರ್ತರೆಲ್ಲ ಪುತ್ತಿಲ ಪರ ನಿಂತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಿದ್ದ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಡಿವಿ ಸದಾನಂದ ಗೌಡ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಹೀನಾಯ ಸೋಲಿಗೆ ಇವರಿಬ್ಬರೇ ಕಾರಣ ಎಂದು ಸಿಟ್ಟಿನಲ್ಲಿ ಕಾರ್ಯಕರ್ತರೇ ಸೇರಿಕೊಂಡು ಭಾನುವಾರ ರಾತ್ರಿ ಬ್ಯಾನರ್ ಹಾಕಿದ್ದರು.
ಬ್ಯಾನರ್ ಫೋಟೋ ವೈರಲ್ ಆಗಿ ಬಿಜೆಪಿ ನಾಯಕರಿಗೆ ಇರಿಸು ಮುರಿಸು ಆಗುತ್ತಲೇ ಪೊಲೀಸರಿಗೆ ಒತ್ತಡ ಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ, ಬೆಂಡೆತ್ತಬೇಕು ಎಂದು ಸ್ಥಳೀಯ ನಳಿನ್ ಪರ ಇರುವ ಬಿಜೆಪಿ ಪುಢಾರಿಗಳು ಪೊಲೀಸರಿಗೆ ಸೂಚನೆ ನೀಡಿದ್ದರು. ಪ್ರಮುಖ ಒಬ್ಬ ಆರೋಪಿಯನ್ನು ಬಿಟ್ಟು ಏಳು ಮಂದಿಯನ್ನು ಬಂಧಿಸಿದ ಪೊಲೀಸರು ಠಾಣೆಯಲ್ಲಿ ಕೂಡಿಹಾಕಿ, ಬೆತ್ತ ಪುಡಿ ಮಾಡಿದ್ದಾರೆಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ವಿಷಯ ತಿಳಿದ ಅರುಣ್ ಪುತ್ತಿಲ ಸೋಮವಾರ ರಾತ್ರಿ 1 ಗಂಟೆ ವೇಳೆಗೆ ಠಾಣೆಗೆ ತೆರಳಿ ಏಳು ಮಂದಿಯನ್ನೂ ಬಿಡುಗಡೆ ಮಾಡಿಸಿದ್ದಾರೆ. ಆರೋಪಿಗಳನ್ನು ಮುಚ್ಚಳಿಕೆ ಬರೆಸಿ, ಪೊಲೀಸರು ಕಳಿಸಿಕೊಟ್ಟಿದ್ದಾರೆ. ಈ ಘಟನೆ ಪುತ್ತೂರಿನಲ್ಲಿ ಸಂಘಟನೆಯೊಳಗೆ ಮತ್ತಷ್ಟು ಬಿರುಕು ಮೂಡಲು ಕಾರಣವಾಗಿದೆ.
Puttur Poster Sadananda Gowda, BJP Nalin kateel garlanded with footwear, 7 arrested, Arun Puthila gets them released from Police station. The writing on the banner says, “Heartfelt obituary to both of you
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm