ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ; ಬಿಜೆಪಿ ಕಾರ್ಯಕರ್ತರಿಗೆ ಠಾಣೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ, ರಕ್ತ ಒಸರುವಷ್ಟು ಥಳಿತ ! ಪೊಲೀಸರ ಅಮಾನುಷ ಕೃತ್ಯ 

17-05-23 01:15 pm       Mangalore Correspondent   ಕರಾವಳಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ.

ಮಂಗಳೂರು, ಮೇ 17 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ. ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು ಪೊಲೀಸರ ನಡೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. 

ಪೊಲೀಸ್ ಠಾಣೆಯಲ್ಲಿ ಆರೋಪಿಗಳನ್ನು ಕೂಡಿಹಾಕಿ ಆರೋಪಿಗಳಿಗೆ ತೀವ್ರವಾಗಿ ಥಳಿಸಲಾಗಿದೆ. ನಳಿನ್ ಕುಮಾರ್ ಆಪ್ತರು ಮತ್ತು ಪುತ್ತೂರಿನ ಬಿಜೆಪಿ ಪುಢಾರಿಗಳ ಒತ್ತಡಕ್ಕೊಳಗಾಗಿ ಪೊಲೀಸರು ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡಿದ್ದಾರೆ.

ಪೊಲೀಸರ ಕಿರುಕುಳದಿಂದ ಕಾರ್ಯಕರ್ತರು ಎದ್ದು ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಏಳು ಮಂದಿ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಪಕ್ಷದ ಸೋಲಿನ ಬಗ್ಗೆ ಆಕ್ರೋಶಗೊಂಡು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ಮಾಜಿ‌ ಸಿಎಂ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ್ದರು. ಪೊಲೀಸರು ತೀವ್ರ ರೀತಿಯ ಕಿರುಕುಳ, ಚಿತ್ರಹಿಂಸೆ ಕೊಟ್ಟಿದ್ದಾರೆ. ಪೊಲೀಸರ ಕಿರುಕುಳ ವಿಷಯ ತಿಳಿದು ಅರುಣ್ ಪುತ್ತಲ ಕಾರ್ಯಕರ್ತರನ್ನು ಅವರ ಕೈಯಿಂದ ಬಿಡಿಸಿ ತಂದಿದ್ದಾರೆ. ‌

ತಮ್ಮ ಪಕ್ಷದ ಕಾರ್ಯಕರ್ತರಿಗೇ ಈ ರೀತಿ ಪೊಲೀಸರ ಮೂಲಕ ಚಿತ್ರಹಿಂಸೆ ಕೊಡಿಸಿದ್ದು ಪುತ್ತೂರಿನಲ್ಲಿ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಪುತ್ತೂರಿನ ಬಿಜೆಪಿ ಪುಢಾರಿಗಳ ವಿರುದ್ಧ ಕಾರ್ಯಕರ್ತರ ಒಳಗಿನಿಂದಲೇ ಆಕ್ರೋಶದ ಕಟ್ಟೆಯೊಡೆದಿದೆ.

ನಳಿನ್, ಡಿವಿಎಸ್ ಭಾವಚಿತ್ರಕ್ಕೆ ಚಪ್ಪಲಿ ಹಾರ, ಶ್ರದ್ಧಾಂಜಲಿ ಕೋರಿ ಬ್ಯಾನರ್ ! ಪುತ್ತೂರಿನಲ್ಲಿ ಕಾರ್ಯಕರ್ತರ ಆಕ್ರೋಶ

ಚಪ್ಪಲಿ ಹಾರ ಬ್ಯಾನರ್ ; ಏಳು ಕಾರ್ಯಕರ್ತರನ್ನು ಬಂಧಿಸಿ ಬೆತ್ತ ಪುಡಿಗೈದ ಪೊಲೀಸರು, ಮಧ್ಯರಾತ್ರಿ ಬಿಡಿಸಿ ತಂದ ಅರುಣ್ ಪುತ್ತಿಲ

Garland of footwear banner put on BJP leaders in Puttur, third degree torture to hindu karyakartas arrested by police. Recently a poster containing photographs of Sadananda Gowda ane Nalin kateel was found garlanded with footwear and written as heartfelt obituary is displayed near bus stand in the city. Arun Puthila had to intervene in getting the seven released from the Police station.