ಬ್ರೇಕಿಂಗ್ ನ್ಯೂಸ್
29-10-20 05:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 29: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ಮುಚ್ಚಿ ಹಾಕಲು ತೆರೆಮರೆಯಲ್ಲಿ ಕಸರತ್ತು ನಡೆಸಿದ ಆರೋಪ ಎದುರಿಸುತ್ತಿರುವ ಪ್ರೊ.ಅರವಿ ಅವರನ್ನು ಸರಕಾರಿ ಸೇವೆಯಿಂದೇ ವಜಾಗೊಳಿಸಲು ಸಿಂಡಿಕೇಟ್ ಸಭೆ ನಿರ್ಧಾರ ಕೈಗೊಂಡಿದೆ.
ಬುಧವಾರ ಮಂಗಳೂರು ವಿವಿಯಲ್ಲಿ ಸಿಂಡಿಕೇಟ್ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ವಿದ್ಯಾರ್ಥಿನಿಗೆ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಗಂಭೀರ ಪ್ರಕರಣವಾಗಿದ್ದು, ಇದಕ್ಕೆ ವೃತ್ತಿ ಬಹಿಷ್ಕಾರ ಶಿಕ್ಷೆಯೇ ಸೂಕ್ತ ಎಂದು ನಿರ್ಣಯಕ್ಕೆ ಬರಲಾಗಿದೆ. ಆದರೆ, ಪ್ರೊಫೆಸರ್ ಆಗಿರುವ ವ್ಯಕ್ತಿಯನ್ನು ನೇರವಾಗಿ ತೆಗೆದು ಹಾಕುವಂತಿಲ್ಲ. ಆ ಕುರಿತು ಅಗತ್ಯ ಪ್ರಕ್ರಿಯೆ ನಡೆಯಬೇಕಾಗಿರುವುದರಿಂದ ಮೊದಲಿಗೆ ವಿವಿಯಿಂದ ನೋಟೀಸ್ ನೀಡಲು ನಿರ್ಧರಿಸಲಾಗಿದೆ.
ಇದೇ ವೇಳೆ, ಮಹಿಳಾ ಆಯೋಗವೂ ಪ್ರೊ.ಅರಬಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದರೆ ವಜಾ ಶಿಕ್ಷೆ ತಕ್ಷಣವೇ ಜಾರಿಗೊಳಿಸುವ ಸಾಧ್ಯತೆಯಿದೆ. ಪ್ರೊ.ಅರಬಿ ಸೇವೆಯಿಂದ ವಜಾಗೊಂಡರೆ ಮಂಗಳೂರು ವಿವಿಯಲ್ಲಿ ಪ್ರೊಫೆಸರ್ ವಜಾ ಆಗುತ್ತಿರುವ 2ನೇ ಪ್ರಕರಣ ಇದಾಗಲಿದೆ. 10 ವರ್ಷಗಳ ಹಿಂದೆ ಪ್ರೊ.ತಿಪ್ಪೇಸ್ವಾಮಿ ವಿರುದ್ಧ ಇದೇ ರೀತಿಯ ಕ್ರಮ ಕೈಗೊಳ್ಳಲಾಗಿತ್ತು.

2018ರಲ್ಲಿ ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಅರಬಿ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಸಂಶೋಧನಾ ವಿದ್ಯಾರ್ಥಿನಿಯೊಬ್ಬಳು ಕುಲಸಚಿವರಿಗೆ ದೂರು ನೀಡಿದ್ದರು. ಕುಲಸಚಿವರು ನಿರ್ಲಕ್ಷ್ಯ ವಹಿಸಿದ್ದರಿಂದ ಬಳಿಕ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಹಿಳಾ ಆಯೋಗದಿಂದ ಕೂಡಲೇ ಪ್ರಕರಣದ ತನಿಖೆ ನಡೆಸುವಂತೆ ಸೂಚನೆ ಬಂದಿತ್ತು. ಅದರಂತೆ, ಮಹಿಳಾ ಪ್ರೊಫೆಸರ್ ಮತ್ತು ವಕೀಲರನ್ನು ಒಳಗೊಂಡ ಆಂತರಿಕ ತನಿಖಾ ಸಮಿತಿ ರಚಿಸಿ ವಿವಿ ಆಡಳಿತ ವರದಿ ಕೇಳಿತ್ತು. ಆಬಳಿಕ ಮುಚ್ಚಿದ ಲಕೋಟೆಯಲ್ಲಿ ತನಿಖಾ ಸಮಿತಿ ನೀಡಿದ್ದ ವರದಿಯನ್ನು ವಿವಿಯ ಅಂದಿನ ಕುಲಸಚಿವ ಪ್ರೊ.ಎ.ಎಂ. ಖಾನ್, ಇಡೀ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಕಪಾಟಿನಲ್ಲೇ ಇರಿಸಿದ್ದರು.
2020ರ ಸೆಪ್ಟಂಬರ್ ತಿಂಗಳಲ್ಲಿ ಮಹಿಳಾ ಆಯೋಗ ಮತ್ತೆ ನೋಟೀಸ್ ನೀಡಿದ್ದರಿಂದ ಈಗಿನ ಕುಲಸಚಿವ ರಾಜು ಮೊಗವೀರ ಎಚ್ಚತ್ತುಕೊಂಡು ವರದಿಯನ್ನು ಕಳೆದ ಬಾರಿ ಸಿಂಡಿಕೇಟ್ ಸಭೆ ಮುಂದಿರಿಸಿದ್ದರು.
ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ ಅಂದಿನ ಕುಲಸಚಿವ ಎ.ಎಂ. ಖಾನ್ ವಿರುದ್ಧವೂ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ದೂರು ನೀಡುವ ಬಗ್ಗೆ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎನ್ನುವ ಮಾಹಿತಿ ಇದೆ.
Sexual Assault on student Syndicate team decides to terminate professor Arabi from Mangalore University.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm