ಬ್ರೇಕಿಂಗ್ ನ್ಯೂಸ್
23-05-23 05:28 pm Mangalore Correspondent ಕರಾವಳಿ
ಪುತ್ತೂರು, ಮೇ 23 : ಪೊಲೀಸ್ ದೌರ್ಜನ್ಯದಿಂದ ತೀವ್ರ ಹಲ್ಲೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಅವಿನಾಶ್ ಅವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ಬಗ್ಗೆ ವೈದ್ಯರು ವರದಿ ಕೊಟ್ಟಿದ್ದಾರೆ. ಕಿವಿಯ ಸ್ಕ್ಯಾನಿಂಗ್ ವೇಳೆ ತಮಟೆಗೆ ಪೆಟ್ಟು ಬಿದ್ದಿರುವುದು ಕಂಡುಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ 11 ಜನರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಆನಂತರ, ಮೇ 15 ರ ಮಧ್ಯರಾತ್ರಿ ಅರುಣ್ ಪುತ್ತಿಲ ಡಿವೈಎಸ್ಪಿ ಕಚೇರಿಗೆ ಹೋಗಿ ಹಲ್ಲೆಗೀಡಾದ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ಬಂದಿದ್ದರು. ಇಬ್ಬರು ಕಾರ್ಯಕರ್ತರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಪುತ್ತೂರಿನ ಡಿವೈಎಸ್ಪಿ, ಸಂಪ್ಯ ಠಾಣೆಯ ಎಸ್ಐ ಮತ್ತು ಪೊಲೀಸ್ ಸಿಬಂದಿ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂಪ್ಯ ಠಾಣೆ ಎಸ್ಐ ಮತ್ತು ಸಿಬಂದಿಯನ್ನು ಅಮಾನತು ಮಾಡಿ, ಡಿವೈಎಸ್ಪಿಯನ್ನು ರಜೆಯಲ್ಲಿ ಕಳುಹಿಸಲಾಗಿತ್ತು.
ತೀವ್ರ ಗಾಯಗೊಂಡಿದ್ದ ಅವಿನಾಶ್ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿದ್ದು ತಮಟೆ ಹರಿದ ಬಗ್ಗೆ ವೈದ್ಯಕೀಯ ವರದಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಅವರು ದಕ್ಷಿಣ ಕನ್ನಡ ಎಸ್ಪಿ ವಿಕ್ರಂ ಅಮಾಟೆಯನ್ನು ಭೇಟಿಯಾಗಿದ್ದು ಎರಡು ದಿನದೊಳಗೆ ಹಲ್ಲೆ ನಡೆಸಿರುವ ಡಿವೈಎಸ್ಪಿ ಅಧಿಕಾರಿಯನ್ನು ಅಮಾನತು ಮಾಡಬೇಕು ಮತ್ತು ಸಂತ್ರಸ್ತರಿಗೆ 5 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕ್ರಮ ಜರುಗಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
Puttur Police Autrocity over BJP banner row, Victim Avinash ear drum damaged, Arun Puthila demands DYSP suspension for brutal third degree tortured on seven hindu karyakartas arrested over footwear garland on Nalin Kateel and Sadananada Gowda banner.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm